November 24, 2026
Tuesday, November 24, 2026
spot_img

7 ಸಾವಿರ ರೂ. ಸಂಬಳದಲ್ಲಿ ಬದುಕೋದು ಹೇಗೆ?: ಆಶಾ ಕಾರ್ಯಕರ್ತೆಯರ ಪರ ರಮ್ಯಾ ಬ್ಯಾಟಿಂಗ್

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಬಿಸಿಲು, ಮಳೆ, ಚಳಿಯನ್ನೂ ಲೆಕ್ಕಿಸದೆ ತಮ್ಮ ಹಕ್ಕುಗಳಿಗಾಗಿ ಬೀದಿಗಿಳಿದಿರುವ ಆಶಾ ಕಾರ್ಯಕರ್ತೆಯರ ಹೋರಾಟಕ್ಕೆ ಇದೀಗ ಸ್ಯಾಂಡಲ್‌ವುಡ್ ನಟಿ ಹಾಗೂ ಮಾಜಿ ಸಂಸದೆ ರಮ್ಯಾ ಧ್ವನಿಯಾಗಿದ್ದಾರೆ.

ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಕಳೆದೊಂದು ವಾರದಿಂದ ಪ್ರತಿಭಟನೆ ನಡೆಸುತ್ತಿರುವ ಸಾವಿರಾರು ಕಾರ್ಯಕರ್ತೆಯರನ್ನು ಭೇಟಿ ಮಾಡಿದ ಅವರು, ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಅಲ್ಲದೆ, ಸರ್ಕಾರ ಅವರ ಬೇಡಿಕೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸಲಿದೆ ಎಂಬ ವಿಶ್ವಾಸವನ್ನೂ ವ್ಯಕ್ತಪಡಿಸಿದ್ದಾರೆ.

7 ಸಾವಿರ ರೂ. ಗೌರವಧನ ಸಾಕಾಗಲ್ಲ ಎಂದ ರಮ್ಯಾ

ಕರ್ನಾಟಕದಲ್ಲಿ ಆಶಾ ಕಾರ್ಯಕರ್ತೆಯರಿಗೆ ನೀಡುತ್ತಿರುವ 7 ಸಾವಿರ ರೂಪಾಯಿ ಗೌರವಧನ ಅತ್ಯಂತ ಕಡಿಮೆ ಎಂದು ರಮ್ಯಾ ಅಭಿಪ್ರಾಯಪಟ್ಟಿದ್ದಾರೆ. ಕಾರ್ಯಕರ್ತೆಯರು ಮುಂದಿಟ್ಟಿರುವ ಬೇಡಿಕೆಗಳಲ್ಲಿ ಯಾವುದೇ ತಪ್ಪಿಲ್ಲ. ನೆರೆರಾಜ್ಯ ಕೇರಳದಲ್ಲಿ ಆಶಾ ಕಾರ್ಯಕರ್ತೆಯರಿಗೆ ಈಗಾಗಲೇ 12 ಸಾವಿರದಿಂದ 13 ಸಾವಿರ ರೂಪಾಯಿವರೆಗೆ ಗೌರವಧನ ನೀಡಲಾಗುತ್ತಿದೆ. ಹೀಗಿರುವಾಗ ಕರ್ನಾಟಕದಲ್ಲಿಯೂ ಅವರ ಪರಿಶ್ರಮಕ್ಕೆ ತಕ್ಕ ಪ್ರತಿಫಲ ಸಿಗಬೇಕು ಎಂದು ಹೇಳಿದ್ದಾರೆ.

ಇದನ್ನೂ ಓದಿ:

ಹಗಲು-ರಾತ್ರಿ ಎನ್ನದೆ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಭಾಗವಾಗಿ ಕೆಲಸ ಮಾಡುವ ಕಾರ್ಯಕರ್ತೆಯರು ತಮ್ಮ ನ್ಯಾಯಯುತ ಬೇಡಿಕೆಗಳಿಗಾಗಿ ಇಷ್ಟು ದಿನ ಬೀದಿಯಲ್ಲಿ ಕುಳಿತು ಹೋರಾಡುತ್ತಿರುವುದನ್ನು ಕಂಡು ಬೇಸರವಾಗುತ್ತಿದೆ ಎಂದಿದ್ದಾರೆ.

ಆರೋಗ್ಯ ಸಚಿವರ ಭೇಟಿ ಬಗ್ಗೆಯೂ ಮಾಹಿತಿ

ಇತ್ತೀಚೆಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಅವರನ್ನು ಭೇಟಿ ಮಾಡಿದ್ದಾಗಿ ತಿಳಿಸಿದ ರಮ್ಯಾ, ಆಶಾ ಕಾರ್ಯಕರ್ತೆಯರೇ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಬೆನ್ನೆಲುಬು ಎಂದು ಸಚಿವರು ಹೇಳಿದ್ದಾರೆ. ಹೀಗಾಗಿ ಸರ್ಕಾರ ಅವರ ಬೇಡಿಕೆಗಳನ್ನು ಈಡೇರಿಸಲಿದೆ ಎಂಬ ಭರವಸೆ ಇದೆ. ತಮ್ಮಿಂದ ಸಾಧ್ಯವಾದ ಎಲ್ಲ ಪ್ರಯತ್ನಗಳನ್ನೂ ಮಾಡುವುದಾಗಿ ತಿಳಿಸಿದ್ದಾರೆ.

Must Read

Skip to toolbar