ಹೊಸದಿಗಂತ ಡಿಜಿಟಲ್ ಡೆಸ್ಕ್:
ದರ್ಶನ್ ಆಂಡ್ ಗ್ಯಾಂಗ್‌ನಿಂದ ಕೊಲೆಯಾಗಿದ್ದಾರೆ ಎನ್ನಲಾದ ರೇಣುಕಾಸ್ವಾಮಿಯ ಕೊನೆಯ ಘಳಿಗೆಯ ಫೋಟೊಗಳು ಇದೀಗ ವೈರಲ್ ಆಗುತ್ತಿವೆ.
ಕೊಲೆಗೂ ಮುನ್ನ ರೇಣುಕಾಸ್ವಾಮಿ ದಯನೀಯ ಸ್ಥಿತಿಯಲ್ಲಿದ್ದ ಫೋಟೋ ರಿವೀಲ್ ಆಗಿದೆ. ನನ್ನನ್ನು ಬಿಟ್ಟುಬಿಡಿ, ನಿಮ್ಮ ಸುದ್ದಿಗೆ ಬರೋದಿಲ್ಲ ಎಂದು ರೇಣುಕಾಸ್ವಾಮಿ ಅಂಗಲಾಚಿರುವ ಫೋಟೊ ಇದಾಗಿದೆ.
ರೇಣುಕಾ ಸ್ವಾಮಿ ಅಂಗಲಾಚುತ್ತಿರುವ ಫೋಟೋ ಮಾತ್ರವಲ್ಲದೆ ಅವರು ಶವವಾಗಿ ಬಿದ್ದ ಫೋಟೋಗಳು ಸಿಕ್ಕಿವೆ. ಆರೋಪಿಗಳ ಮೊಬೈಲ್ನಲ್ಲಿ ಇದನ್ನು ಸೆರೆಹಿಡಿದುಕೊಳ್ಳಲಾಗಿತ್ತು. ಆ ಬಳಿಕ ಇದನ್ನು ಡಿಲೀಟ್ ಮಾಡಿದ್ದರು. ಈಗ ಈ ಫೋಟೋಗಳನ್ನು ರಿಟ್ರೀವ್ ಮಾಡಲಾಗಿದೆ. ಚಾರ್ಜ್ಶೀಟ್ನಲ್ಲಿ ಈ ಫೋಟೋಗಳನ್ನು ಲಗತ್ತಿಸಲಾಗಿದೆ. ಇದು ಪ್ರಕರಣದಲ್ಲಿ ಪ್ರಮುಖ ಸಾಕ್ಷಿ ಆಗುವ ಸಾಧ್ಯತೆ ಇದೆ.