ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಂದು ಮುಂಜಾನೆ ಹೌರಾ-ಮುಂಬೈ ಪ್ಯಾಸೆಂಜರ್ ರೈಲು ಹಳಿತಪ್ಪಿ ಇಬ್ಬರು ಸಾವನ್ನಪ್ಪಿದ್ದು, 20 ಮಂದಿ ಗಾಯಗೊಂಡಿದ್ದಾರೆ. ಜಾರ್ಖಂಡ್‌ನ ಚರಧರ್‌ಪುರ ವಿಭಾಗದ ಬಳಿ ರಾಜ್‌ಖರ್‌ಸ್ವಾನ್ ವೆಸ್ಟ್ ಔಟರ್ ಮತ್ತು ಬಾರಾಬಾಂಬೂ ನಡುವೆ ಮುಂಜಾನೆ 3:43 ರ ಸುಮಾರಿಗೆ ಈ ಘಟನೆ ನಡೆದಿದೆ.
ಗಾಯಗೊಂಡ ಎಲ್ಲ ಪ್ರಯಾಣಿಕರಿಗೆ ಪ್ರಥಮ ಚಿಕಿತ್ಸೆ ನೀಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ರೈಲಿನ 18 ಬೋಗಿಗಳು ಹಳಿತಪ್ಪಿವೆ, ಅದರಲ್ಲಿ 16 ಪ್ಯಾಸೆಂಜರ್ ಕೋಚ್‌ಗಳು, ಒಂದು ಪವರ್ ಕಾರ್ ಮತ್ತು ಒಂದು ಪ್ಯಾಂಟ್ರಿ ಕಾರ್ ಎಂದು ಹೇಳಲಾಗಿದೆ.
ಎದುರುಗಡೆಯಿಂದ ಬರುತ್ತಿದ್ದ ಗೂಡ್ಸ್ ರೈಲು ಹಳಿತಪ್ಪಿ ಎದುರಿನಿಂದ ಹಾದು ಹೋಗುತ್ತಿದ್ದ ಪ್ಯಾಸೆಂಜರ್ ರೈಲು ಮೇಲೆ ಪರಿಣಾಮ ಬೀರಿದಕ್ಕೆ ಈ ಘಟನೆ ಸಂಭವಿಸಿದೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.