ಹಳಿತಪ್ಪಿದ ಹೌರಾ-ಮುಂಬೈ ಪ್ಯಾಸೆಂಜರ್ ರೈಲು: ಆರು ಮಂದಿಗೆ ಸಣ್ಣಪುಟ್ಟ ಗಾಯ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಇಂದು ಮುಂಜಾನೆ ಹೌರಾ-ಮುಂಬೈ ಪ್ಯಾಸೆಂಜರ್ ರೈಲು ಹಳಿತಪ್ಪಿದ್ದು, ಕನಿಷ್ಠ ಐದರಿಂದ ಆರು ಮಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ವರದಿಯಾಗಿದೆ.

ಜಾರ್ಖಂಡ್‌ನ ಚರಧರ್‌ಪುರ ವಿಭಾಗದ ಬಳಿ ರಾಜ್‌ಖರ್‌ಸ್ವಾನ್ ವೆಸ್ಟ್ ಔಟರ್ ಮತ್ತು ಬಾರಾಬಾಂಬೂ ನಡುವೆ ಮುಂಜಾನೆ 3:43 ರ ಸುಮಾರಿಗೆ ಈ ಘಟನೆ ನಡೆದಿದೆ. ಗಾಯಗೊಂಡ ಎಲ್ಲ ಪ್ರಯಾಣಿಕರಿಗೆ ಪ್ರಥಮ ಚಿಕಿತ್ಸೆ ನೀಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಾಥಮಿಕ ಮಾಹಿತಿ ಪ್ರಕಾರ ರೈಲಿನ 14 ಬೋಗಿಗಳು ಹಳಿ ತಪ್ಪಿವೆ. ಎದುರಿನಿಂದ ಬರುತ್ತಿದ್ದ ಗೂಡ್ಸ್ ರೈಲು ಹಳಿತಪ್ಪಿ ಎದುರಿನಿಂದ ಹಾದು ಹೋಗುತ್ತಿದ್ದ ಪ್ಯಾಸೆಂಜರ್ ರೈಲು, ಪರಿಣಾಮ ಈ ಘಟನೆ ಸಂಭವಿಸಿದೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.

ಈ ಘಟನೆ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!