ಹೊಸದಿಗಂತ ಡಿಜಿಟಲ್ ಡೆಸ್ಕ್:
ಯುನೆಸ್ಕೋ ವಿಶ್ವ ಪಾರಂಪರಿಕ ತಾಣಗಳ ಪಟ್ಟಿಯಲ್ಲಿ ಕರ್ನಾಟಕದ ಹಾಸನ ಜಿಲ್ಲೆ ಬೇಲೂರು ಮತ್ತು ಹಳೆಬೀಡಿನಲ್ಲಿರುವ ಹಾಗೂ ಮೈಸೂರು ಜಿಲ್ಲೆ ಸೋಮನಾಥಪುರದಲ್ಲಿರುವ ಹೊಯ್ಸಳ ದೇವಾಲಯಗಳು ಸ್ಥಾನ ಪಡೆದಿವೆ.
ಸೋಮನಾಥಪುರಲ್ಲಿರುವ ಕೇಶವ ದೇವಸ್ಥಾನ, ಬೇಲೂರಿನಲ್ಲಿರುವ ಚನ್ನಕೇಶವ ದೇವಸ್ಥಾನ ಹಾಗೂ ಹಳೆಬೀಡಿನಲ್ಲಿರುವ ಹೊಯ್ಸಳೇವರ ದೇವಸ್ಥಾನಗಳು ಯುನೆಸ್ಕೋ ವಿಶ್ವ ಪಾರಂಪರಿಕ ತಾಣಗಳ ಪಟ್ಟಿಯಲ್ಲಿ ಸೇರಿವೆ.
ಈ ದೇವಾಲಯಗಳು ಕಲೆ, ವಾಸ್ತುಶಿಲ್ಪ, ಸಂಸ್ಕೃತಿಯ ಪ್ರತೀಕವಾಗಿದ್ದು, 12-13 ನೇ ಶತಮಾನದಲ್ಲಿ ನಿರ್ಮಿಸಲಾದ ಹೊಯ್ಸಳರ ಶೈಲಿಯ ಶಿಲ್ಪಕಲಾ ಶೈಲಿಯ ದೇಗುಲಗಳು, ಬೇಲೂರು, ಹಳೇಬೀಡು ಮತ್ತು ಸೋಮನಾಥಪುರದ ಮೂರು ದೇವಾಲಯಗಳಿಂದ ಇಲ್ಲಿ ಪ್ರತಿನಿಧಿಸಲ್ಪಟ್ಟಿದೆ.
The Sacred Ensembles of Hoysalyas in Karnataka have now become India's 42nd inscription on the #WorldHeritage List!!
The site includes three temple complexes dating from the 12th to 13th centuries built during the Hoysala Kingdom in southern India.#Heritage #Culture pic.twitter.com/0Hisqefto2
— UNESCO New Delhi 🏛️ #Education #Sciences #Culture (@unesconewdelhi) September 18, 2023