Sunday, October 1, 2023

Latest Posts

ಯುನೆಸ್ಕೋ ಪಾರಂಪರಿಕ ತಾಣಗಳ ಪಟ್ಟಿಯಲ್ಲಿ ಹೊಯ್ಸಳ ದೇವಾಲಯಗಳು: ಪ್ರಧಾನಿ ಮೋದಿ ಸಂತಸ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಯುನೆಸ್ಕೋ ವಿಶ್ವ ಪಾರಂಪರಿಕ ತಾಣಗಳ ಪಟ್ಟಿಯಲ್ಲಿ ಕರ್ನಾಟಕದ ಹೊಯ್ಸಳರ ಕಾಲದ ಮೂರು ಪ್ರಮುಖ ದೇವಾಲಯಗಳು ಸ್ಥಾನ ಪಡೆದಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಸಂತಸ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿದ ಪ್ರಧಾನಿ ಮೋದಿ, ಹೊಯ್ಸಳರ ಭವ್ಯವಾದ ಪವಿತ್ರ ದೇವಾಲಯಗಳು ಯುನೆಸ್ಕೋ ವಿಶ್ವ ಪರಂಪರೆಯ ಪಟ್ಟಿಯಲ್ಲಿ ಸ್ಥಾನ ಪಡೆದಿವೆ. ಹೊಯ್ಸಳ ದೇವಾಲಯಗಳ ಕಾಲಾತೀತ ಸೌಂದರ್ಯ ಮತ್ತು ಸಂಕೀರ್ಣ ವಿವರಗಳು ಭಾರತದ ಶ್ರೀಮಂತ ಸಾಂಸ್ಕೃತಿಕ ಪರಂಪರೆ ಮತ್ತು ನಮ್ಮ ಪೂರ್ವಜರ ಅಸಾಧಾರಣ ಕರಕುಶಲತೆಗೆ ಸಾಕ್ಷಿಯಾಗಿದೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

ಮೈಸೂರು ಜಿಲ್ಲೆಯ ಸೋಮನಾಥಪುರಲ್ಲಿರುವ ಕೇಶವ ದೇವಸ್ಥಾನ, ಹಾಸನ ಜಿಲ್ಲೆಯ ಬೇಲೂರಿನಲ್ಲಿರುವ ಚನ್ನಕೇಶವ ದೇವಸ್ಥಾನ ಹಾಗೂ ಹಳೆಬೀಡಿನಲ್ಲಿರುವ ಹೊಯ್ಸಳೇವರ ದೇವಸ್ಥಾನಗಳು ಯುನೆಸ್ಕೋ ವಿಶ್ವ ಪಾರಂಪರಿಕ ತಾಣಗಳ ಪಟ್ಟಿಯಲ್ಲಿ ಸೇರಿವೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!