Saturday, November 22, 2025

ಬೆಳಗಾವಿಯಲ್ಲಿ 31 ಕೃಷ್ಣಮೃಗಗಳ ದಾರುಣ ಸಾವಿಗೆ ಎಚ್‌ಎಸ್ ಬ್ಯಾಕ್ಟೀರಿಯಾ ಕಾರಣ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಬೆಳಗಾವಿ ತಾಲೂಕಿನ ರಾಣಿ ಚೆನ್ನಮ್ಮ ಮೃಗಾಲಯದಲ್ಲಿ 31 ಕೃಷ್ಣಮೃಗಗಳ ದಾರುಣ ಸಾವಿಗೆ ಹೆಚ್‌ಎಸ್‌ ಬ್ಯಾಕ್ಟೀರಿಯಾ ಕಾರಣವಾಗಿದೆ. ಸಾಂಕ್ರಾಮಿಕ ರೋಗದಿಂದ ಕೃಷ್ಣಮೃಗಗಳು ಸಾವನ್ನಪ್ಪಿವೆ ಎಂದು ದೃಢಪಟ್ಟಿದೆ.

31 ಕೃಷ್ಣಮೃಗಗಳ ಸಾವಿಗೆ (ಗಳಲೆ) ಹಿಮೋರೆಜಿಕ್ ಸೆಪ್ಟಿಸೆಮೀಯಾ ಕಾರಣ ಎನ್ನುವುದು ದೃಢಪಟ್ಟಿದೆ ಎಂದು ತಿಳಿಸಿದ್ದಾರೆ. ಅ.13ರಿಂದ 16ರವರೆಗೆ 31 ಕೃಷ್ಣಮೃಗಗಳು ಸಾವಿಗೀಡಗಿದ್ದವು. ಕೃಷ್ಣಮೃಗಗಳ ಸಾವು ಹಿನ್ನೆಲೆ ಬನ್ನೇರುಘಟ್ಟ, ಬೆಂಗಳೂರಿನ ತಜ್ಞ ವೈದ್ಯರಿಂದ ಮರಣೋತ್ತರ ಪರೀಕ್ಷೆ ನಡೆಸಲಾಗಿತ್ತು. ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನದ ವೈರಾಣು ತಜ್ಞ ಡಾ.ಚಂದ್ರಶೇಖರ ಅವರು ಮೃಗಾಲಯದ ಅಧಿಕಾರಿಗಳಿಗೆ ಮಾಹಿತಿ ಬಿಡುಗಡೆ ಮಾಡಿದ್ದಾರೆ.

ಕೃಷ್ಣಮೃಗಗಳು HS ಬ್ಯಾಕ್ಟೀರಿಯಾದಿಂದ ಸಾವಾಗಿದೆ ಎಂದು ತಿಳಿಸಿದ್ದಾರೆ. ಮತ್ತೊಂದೆಡೆ ಹಠಾತ್ ತಾಪಮಾನ ಕುಸಿತ, ಒತ್ತಡದಿಂದಲೂ ಕೃಷ್ಣಮೃಗಗಳ ಮರಣಕ್ಕೆ ಕಾರಣ ಅಂತಲೂ ವರದಿಯಲ್ಲಿ ಉಲ್ಲೇಖಿಸಲಾಗಿದೆ. ಉಳಿದ ಕೃಷ್ಣಮೃಗಗಳ ಆರೋಗ್ಯದಲ್ಲೂ ಚೇತರಿಕೆ ಕಂಡುಬಂದಿದೆ. ಬದುಕುಳಿದ ಏಳು ಕೃಷ್ಣಮೃಗಗಳಿಗೆ ತೀವ್ರ ನಿಗಾದಲ್ಲಿ ಚಿಕಿತ್ಸೆ ಮುಂದುವರಿದಿದೆ.

error: Content is protected !!