ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಷ್ಟು ದಿನ ಹೆಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್‌ಗೆ (HSRP Number Plate) ಸರ್ಕಾರ ಮತ್ತು ಕೋರ್ಟ್ ಗಡುವು ನೀಡಿತ್ತು. ಪದೇ ಪದೇ ಗಡುವು ವಿಸ್ತರಣೆಯಾಗುತ್ತಾ ಬಂದಿತ್ತು. ಇದೀಗ ಹೆಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಸಿಕೊಳ್ಳಲು ನೀಡಿರುವ ಡೆಡ್ ಲೈನ್‌ಗೆ ಕೇವಲ ಒಂದು ವಾರ ಮಾತ್ರ ಬಾಕಿ ಇದೆ.
ಸೆಪ್ಟೆಂಬರ್ 15ಕ್ಕೆ ಹೆಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಕೊಟ್ಟಿರುವ ಡೆಡ್‌ಲೈನ್ ಮುಗಿಯಲಿದೆ. ರಾಜ್ಯದಲ್ಲಿ ಒಟ್ಟಾರೆ 2 ಕೋಟಿಯಷ್ಟು ವಾಹನಗಳಿದ್ದು, ಇದರಲ್ಲಿ ಇಲ್ಲಿಯವರೆಗೆ 51 ಲಕ್ಷ ವಾಹನಗಳು ಮಾತ್ರ ಹೆಚ್‌ಎಸ್‌ಆರ್‌ಪಿ ನಂಬರ್ ಹಾಕಿಸಿದ್ದಾರೆ.
ಉಳಿದ 1.49 ಕೋಟಿ ವಾಹನಗಳು ಇನ್ನೂ ಹೆಚ್‌ಎಸ್‌ಆರ್‌ಪಿ ಹಾಕಿಸಿಲ್ಲ. ಸೆ.16ರಿಂದಲೇ ನಮ್ಮ ಇಲಾಖೆಯಿಂದ ಎಲ್ಲಾ ಜಿಲ್ಲೆಗಳಲ್ಲೂ ಸ್ಪೆಷಲ್ ಡ್ರೈವ್ ಮಾಡಿ 500 ರೂ. ದಂಡ ಹಾಕುತ್ತೇವೆ. ಮೊದಲ ಸಲ 500 ರೂ. ದಂಡ ವಿಧಿಸಿದರೇ ಎರಡನೇ ಸಲಕ್ಕೆ 1,000 ರೂ. ದಂಡ ವಿಧಿಸಲಾಗುತ್ತದೆ ಎಂದು ಸಾರಿಗೆ ಇಲಾಖೆ ಸ್ಪಷ್ಟಪಡಿಸಿದೆ.