ಹೊಸದಿಗಂತ ಡಿಜಿಟಲ್ ಡೆಸ್ಕ್:
ವಾಹನಗಳ ಮೇಲೆ ಹೈ ಸೇಫ್ಟಿ ರಿಜಿಸ್ಟ್ರೇಶನ್ ಪ್ಲೇಟ್ (ಹೆಚ್‌ಎಸ್‌ಆರ್‌ಪಿ) ಅಳವಡಿಸುವ ಗಡುವನ್ನು ಮೂರು ತಿಂಗಳು ವಿಸ್ತರಿಸಲಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಘೋಷಿಸಿದ್ದಾರೆ.
ವಿಧಾನ ಪರಿಷತ್ ನಲ್ಲಿ ಪ್ರಶ್ನೋತ್ತರ ಅವಧಿಯಲ್ಲಿ ಶಾಸಕ ಮಾದೇಗೌಡ ಮಾತನಾಡಿ, ರಾಜ್ಯದಲ್ಲಿ 2 ಕೋಟಿಗೂ ಹೆಚ್ಚು ವಾಹನಗಳಿವೆ. ಹಳ್ಳಿಗರು ತಮ್ಮ ವಾಹನಗಳಲ್ಲಿ ಹೆಚ್‌ಎಸ್‌ಆರ್‌ಪಿ ಪರವಾನಗಿ ಫಲಕಗಳನ್ನು ಇನ್ನೂ ಅಳವಡಿಸಲಾಗಿಲ್ಲ. ಸಾರಿಗೆ ಇಲಾಖೆ ಇತ್ತ ಗಮನಹರಿಸಿ ಕ್ರಮ ಕೈಗೊಳ್ಳಬೇಕು ಎಂದರು.
ಅಷ್ಟೇ ಅಲ್ಲದೆ ಆನ್‌ಲೈನ್ ನೋಂದಣಿಯ ಹಿಂದೆ ನಕಲಿ ವೆಬ್‌ಸೈಟ್‌ಗಳ ಹಾವಳಿ ಹೆಚ್ಚುತ್ತಿದ್ದು, ಹೆಚ್‌ಎಸ್‌ಆರ್‌ಪಿ ಪ್ಲೇಟ್‌ಗಳನ್ನು ಅಳವಡಿಸಲು ಸರ್ಕಾರ ನಿಗದಿಪಡಿಸಿದ ಗಡುವನ್ನು ವಿಸ್ತರಿಸಬೇಕು ಎಂದು ಕೇಳಿಕೊಂಡಿದ್ದಾರೆ.
ಇದಕ್ಕೆ ಪ್ರತಿಕ್ರಿಯಿಸಿದ ಸಚಿವ ರಾಮಲಿಂಗಾರೆಡ್ಡಿ, ಹೆಚ್‌ಎಸ್‌ಆರ್‌ಪಿ ಪ್ಲೇಟ್‌ಗಳನ್ನು ಅಳವಡಿಸುವ ಗಡುವನ್ನು ಮೂರು ತಿಂಗಳು ವಿಸ್ತರಿಸಲಾಗಿದೆ, ನಕಲಿ ಸೈಟ್‌ಗಳ ಬಗ್ಗೆ ದಯವಿಟ್ಟು ಜಾಗರೂಕರಾಗಿರಿ ಈ ಯೋಜನೆಯು ಪಾರದರ್ಶಕವಾಗಿರುತ್ತದೆ ಎಂದು ಹೇಳಿದ್ದಾರೆ.