Friday, September 30, 2022

Latest Posts

ದೇಶದ ಹಲವೆಡೆ ಭಾರೀ ಪ್ರವಾಹ: ಒಂದೇ ದಿನದಲ್ಲಿ 31 ಮಂದಿ ಸಾವು, ಹಲವರು ನಾಪತ್ತೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಹಿಮಾಚಲ ಪ್ರದೇಶ ಸೇರಿದಂತೆ ದೇಶದ ಹಲವು ರಾಜ್ಯಗಳಲ್ಲಿ ಶುಕ್ರವಾರದಿಂದ ಭಾರೀ ಮಳೆಯಾಗುತ್ತಿದೆ. ಇದರಿಂದಾಗಿ ಪ್ರವಾಹ ಸೃಷ್ಟಿಯಾಗಿದ್ದು, ನಿನ್ನೆ ಒಂದೇ ದಿನದಲ್ಲಿ 31ಮಂದಿ ಸಾವನ್ನಪ್ಪಿದ್ದಾರೆ. ಮಂಡಿ ಪ್ರದೇಶದಲ್ಲಿ ಆರು ಮಂದಿ ನಾಪತ್ತೆಯಾಗಿದ್ದಾರೆ. ಉತ್ತರಾಖಂಡದಲ್ಲಿ ನಾಲ್ವರು ಸಾವನ್ನಪ್ಪಿದ್ದು, ಇನ್ನೂ ಹತ್ತು ಮಂದಿ ನಾಪತ್ತೆಯಾಗಿದ್ದಾರೆ.

ಒಡಿಶಾದಲ್ಲಿ 500 ಗ್ರಾಮಗಳ 4.5 ಲಕ್ಷ ಜನರು ಪ್ರವಾಹದಲ್ಲಿ ಸಿಲುಕಿಕೊಂಡಿದ್ದಾರೆ. ಮಹಾನದಿಯಲ್ಲಿ ಸಿಲುಕಿದ್ದ 70 ಮಂದಿಯನ್ನು ಅಧಿಕಾರಿಗಳು ದೋಣಿಗಳ ಸಹಾಯದಿಂದ ರಕ್ಷಿಸಿದ್ದಾರೆ. ಜಲಾವೃತ ಪ್ರದೇಶದಲ್ಲಿರುವ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ. ಜಾರ್ಖಂಡ್‌ನಲ್ಲಿ ಮಳೆಯಿಂದಾಗಿ ಹಲವಾರು ಪ್ರದೇಶಗಳಲ್ಲಿ ಮರಗಳು ಮತ್ತು ವಿದ್ಯುತ್ ಕಂಬಗಳು ಕೆಳಗೆ ಬಿದ್ದಿವೆ.

ಹವಾಮಾನ ಇಲಾಖೆ ಮಾಹಿತಿ ಪ್ರಕಾರ ಮಧ್ಯಪ್ರದೇಶ ಮತ್ತು ರಾಜಸ್ಥಾನದಲ್ಲಿ ಎರಡು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!