Saturday, August 30, 2025

WEATHER | ಕರ್ನಾಟಕದ ಈ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 5ರವರೆಗೆ ಭಾರೀ ಮಳೆ ಮುನ್ಸೂಚನೆ

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಸೆಪ್ಟೆಂಬರ್ 5ರವರೆಗೂ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಬೆಳಗಾವಿ, ಧಾರವಾಡ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ವಿಜಯನಗರ, ತುಮಕೂರು, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಹಾಸನ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ, ಗದಗ, ಬೀದರ್ ಜಿಲ್ಲೆಗಳಲ್ಲಿ ಕೂಡ ಮಳೆಯಾಗಲಿದೆ.

ಇದನ್ನೂ ಓದಿ