Wednesday, November 12, 2025

ನಟಿ ಪ್ರಿಯಾಂಕಾ ಉಪೇಂದ್ರ ಫೋನ್ ಹ್ಯಾಕ್ ಮಾಡಿದ್ದ ಆರೋಪಿ ಅರೆಸ್ಟ್

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ನಟಿ ಪ್ರಿಯಾಂಕ ಉಪೇಂದ್ರ ಮೊಬೈಲ್ ಫೋನ್ ಹ್ಯಾಕ್ ಮಾಡಿ ಹಣ ವಂಚನೆ ಮಾಡಿದ ಆರೋಪಿಯನ್ನು ಪೊಲೀಸರು ಬಂದಿಸಿದ್ದಾರೆ.

ಆರೋಪಿ ಬಿಹಾರ ಮೂಲದ ಯುವಕನಾಗಿದ್ದು, ಸದಾಶಿವನಗರ ಪೊಲೀಸರು ಪತ್ತೆಹಚ್ಚಿ ಬಂಧಿಸಿದ್ದಾರೆ. ಪೊಲೀಸರ ವರದಿ ಪ್ರಕಾರ, ಬಿಹಾರ ಮೂಲದ ವಿಕಾಸ್ ಕುಮಾರ್ ಬಂದಿತ ಆರೋಪಿ. ಸೆಪ್ಟೆಂಬರ್ 15ರಂದು ನಟಿ ಪ್ರಿಯಾಂಕ ಉಪೇಂದ್ರ ಅವರ ಮೊಬೈಲ್ ಫೋನ್‌ಗೆ ಒಂದು ಡೆಲಿವರಿ ಸಂಬಂಧಿತ ಕರೆ ಬಂದಿತ್ತು.

ಆರ್ಡರ್‌ ಡೆಲಿವರಿ ಮಾಡುವ ನೆಪದಲ್ಲಿ ಮಾತನಾಡಿದ ಅಪರಿಚಿತ ವ್ಯಕ್ತಿ, ಫೋನ್‌ನಲ್ಲಿ ಲಿಂಕ್ ಕಳುಹಿಸಿ ಕ್ಲಿಕ್ ಮಾಡಲು ಹೇಳಿದ್ದ. ಪ್ರಿಯಾಂಕ ಅವರು ಅದನ್ನು ಕ್ಲಿಕ್ ಮಾಡಿದ ಕ್ಷಣದಲ್ಲೇ ಅವರ ಮೊಬೈಲ್ ಹ್ಯಾಕ್ ಆಗಿ ಖಾತೆಯಿಂದ ಹಣ ಕಡಿತವಾದ ಪ್ರಕರಣ ನಡೆದಿತ್ತು.

ಘಟನೆ ಬಳಿಕ ಪ್ರಿಯಾಂಕ ಉಪೇಂದ್ರ ತಕ್ಷಣ ಸದಾಶಿವನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಈ ನಿಟ್ಟಿನಲ್ಲಿ ದೂರು ಸ್ವೀಕರಿಸಿದ ಪೊಲೀಸರು ತಾಂತ್ರಿಕ ತಂಡದ ಸಹಾಯದಿಂದ ಪ್ರಕರಣದ ತನಿಖೆ ಆರಂಭಿಸಿದ್ದಾರೆ. ಸೈಬರ್ ಟ್ರೇಲ್ ಹಿಂಬಾಲಿಸಿ ಪೊಲೀಸರು ವಂಚನೆಗೆ ಬಳಸಿದ ಬ್ಯಾಂಕ್ ಖಾತೆ, ಫೋನ್ ನಂಬರು, ಹಾಗೂ ಡಿಜಿಟಲ್ ಲೆಕ್ಕಾಚಾರವನ್ನು ಪತ್ತೆಹಚ್ಚಿದ್ದಾರೆ. ತನಿಖೆಯ ಆಧಾರದ ಮೇಲೆ ಪೊಲೀಸರು ಬಿಹಾರಕ್ಕೆ ತೆರಳಿ ನಿರಂತರ ಕಾರ್ಯಾಚರಣೆಯ ಬಳಿಕ ವಿಕಾಸ್ ಕುಮಾರ್​ನನ್ನು ಬಂಧಿಸಲು ಯಶಸ್ವಿಯಾಗಿದ್ದಾರೆ.

error: Content is protected !!