ಹೊಸದಿಗಂತ ಡಿಜಿಟಲ್ ಡೆಸ್ಕ್:
ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ 3 ಸಾವಿರದ 600 ಹುದ್ದೆಗಳ ಭರ್ತಿಗೆ ಆರ್ಥಿಕ ಇಲಾಖೆಯಿಂದ ಒಪ್ಪಿಗೆ ದೊರೆತಿದ್ದು, ಅಧಿಸೂಚನೆ ಹೊರಡಿಸುವ ಪ್ರಕ್ರಿಯೆ ನಡೆಯುತ್ತಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ.
ಪರಿಷತ್‌ನಲ್ಲಿಂದು ಒಳ ಮೀಸಲಾತಿ ಪ್ರಕ್ರಿಯೆ ಪೂರ್ವದಲ್ಲೇ ಅಧಿಸೂಚನೆ ಹೊರಡಿಸಿದ್ದರಿಂದ ಈಗಾಗಲೇ 947 ಪಿಎಸ್‌ಐಗಳ ಭರ್ತಿ ಪ್ರಕ್ರಿಯೆ ಪೂರ್ಣಗೊಂಡು ಅಭ್ಯರ್ಥಿಗಳು ತರಬೇತಿಯಲ್ಲಿದ್ದಾರೆ. ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ದಿ ಅನುದಾನದಡಿಯಲ್ಲಿ ಕಾಳಗಿ ತಾಲೂಕಿನಲ್ಲಿ ಸಿಪಿಐ ಕಚೇರಿ ಕಟ್ಟಡ ಮತ್ತು ಸಿಪಿಐ ಸಿಬ್ಬಂದಿಗೆ ವಸತಿ ಗೃಹ ನಿರ್ಮಾಣಕ್ಕೆ ಅವಕಾಶ ಕಲ್ಪಿಸಲಾಗುವುದು ಎಂದು ಸಚಿವರು ಇದೇ ವೇಳೆ ತಿಳಿಸಿದ್ದಾರೆ.
GOOD NEWS | ರಾಜ್ಯ ಪೊಲೀಸ್ ಇಲಾಖೆಯ 3,600 ಖಾಲಿ ಹುದ್ದೆಗಳ ಭರ್ತಿಗೆ ಆರ್ಥಿಕ ಇಲಾಖೆ ಗ್ರೀನ್ ಸಿಗ್ನಲ್

