ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಳ್ಳಾರಿ ಘಟನೆಯ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುವ ಅಗತ್ಯವಿಲ್ಲ. ಪ್ರಕರಣವನ್ನು ತನಿಖೆ ಮಾಡುವ ಸಾಮರ್ಥ್ಯ ನಮ್ಮ ಪೊಲೀಸರಿಗೆ ಇದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಹೇಳಿದರು.
ನಮ್ಮ ಪೊಲೀಸರಿಗೆ ತನಿಖೆ ಮಾಡಲು ಆಗುವುದಿಲ್ಲ ಎಂಬ ಸಂದರ್ಭ ಬಂದರೆ ಸಿಬಿಐಗೆ ನೀಡುವ ಬಗ್ಗೆ ಮಾತನಾಡಬಹುದು. ಈಗಾಗಲೇ ಯಾವುದೇ ಪ್ರಕರಣಗಳನ್ನು ಸಿಬಿಐಗೆ ನೀಡುವುದಿಲ್ಲ ಎಂದು ಕ್ಯಾಬಿನೆಟ್‌ನಲ್ಲಿ ತೀರ್ಮಾನ ಮಾಡಲಾಗಿದೆ. ಸಿಬಿಐಗೆ ಕೊಡುವ ಅಗತ್ಯತೆಯೂ ಇಲ್ಲ ಎಂದರು.
ಬಳ್ಳಾರಿ ಪ್ರಕರಣವನ್ನು ಸಿಬಿಐಗೆ ವಹಿಸುವ ಅಗತ್ಯ ಇಲ್ಲ: ಪರಮೇಶ್ವರ್

