Thursday, September 18, 2025

ಕುರುಬ ಸಮುದಾಯ ST ಸೇರ್ಪಡೆಗೆ ಕೇಂದ್ರಕ್ಕೆ ಶಿಫಾರಸ್ಸು: ಸಿಎಂ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 7 ರವರೆಗೆ ನಡೆಯಲಿರುವ ಜಾತಿ ಸಮೀಕ್ಷೆಯಲ್ಲಿ ಕುರುಬ ಸಮುದಾಯದ ಜನರು ತಮ್ಮ ಜಾತಿಯ ಹೆಸರನ್ನು ‘ಕುರುಬ’ ಎಂದು ನೋಂದಾಯಿಸಿಕೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

‘ಸೆ.22ರಿಂದ ನಡೆಯಲಿರುವ ಸಾಮಾಜಿಕ ಆರ್ಥಿಕ ಶೈಕ್ಷಣಿಕ ಸಮೀಕ್ಷೆ ಬರೀ ಕುರುಬರು ಎಸ್ಸಿ–ಎಸ್ಟಿಗಳಿಗೆ ಅಲ್ಲ. ಅದು ರಾಜ್ಯದ ಎಲ್ಲ ಏಳು ಕೋಟಿ ಜನರ ಸ್ಥಿತಿಗತಿ ಅರಿಯಲು ನಡೆಸಲಾಗುತ್ತಿದೆ. ನೀವೆಲ್ಲರೂ ಸಮೀಕ್ಷೆಯಲ್ಲಿ ಜಾತಿ ಕಾಲಂನಲ್ಲಿ ಕುರುಬ ಎಂದೇ ಬರೆಸಬೇಕು. ಹಾಗೆ ಬರೆಸದಿದ್ದರೆ ನಿಮ್ಮ ಸಂಖ್ಯೆ ಕಡಿಮೆಯಾಗಿ ಸಿಗಬೇಕಾದ ಸವಲತ್ತು ಸಿಗುವುದು ಕಷ್ಟವಾಗುತ್ತದೆ ಎಂಬುದನ್ನು ಅರ್ಥಮಾಡಿಕೊಳ್ಳಬೇಕು ಎಂದು ಹೇಳಿದರು.

ಕುರುಬ ಸಮುದಾಯವನ್ನು ST ಗೆ ಸೇರಿಸಲು ಹಿಂದೆಯೂ ಕೇಂದ್ರಕ್ಕೆ ಶಿಫಾರಸ್ಸು ಮಾಡಲಾಗಿತ್ತು. ಇದನ್ನು ಕೇಂದ್ರ ಸರ್ಕಾರ ವಾಪಸ್ ಕಳುಹಿಸಿದೆ. ಹೀಗಾಗಿ ಮತ್ತೆ ಹೆಚ್ಚುವರಿ ಅಂಕಿಅಂಶಗಳು ಮತ್ತು ದಾಖಲೆಗಳ ಸಮೇತ ಕೇಂದ್ರಕ್ಕೆ ಮತ್ತೆ ಶಿಫಾರಸ್ಸು ಕಳುಹಿಸಲಾಗುವುದು ಎಂದು ಭರವಸೆ ನೀಡಿದರು.

ಇದನ್ನೂ ಓದಿ