Sunday, January 11, 2026

ಬಾನು ಮುಷ್ತಾಕ್ ದಸರಾ ಉದ್ಘಾಟನೆ ವಿರೋಧಿಸಿದ ಅರ್ಜಿ ವಜಾ: ಸುಪ್ರೀಂ ಕೋರ್ಟ್ ತೀರ್ಪು ಸ್ವಾಗತಿಸಿದ ಸಿಎಂ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಮೈಸೂರು ದಸರಾ ಉದ್ಘಾಟನೆಗೆ ರಾಜ್ಯ ಸರ್ಕಾರದಿಂದ ಬೂಕರ್ ಪ್ರಶಸ್ತಿ ವಿಜೇತ ಲೇಖಕಿ ಬಾನು ಮುಷ್ತಾಕ್ ಅವರನ್ನು ಆಯ್ಕೆ ಮಾಡಲಾಗಿತ್ತು. ಈ ಕ್ರಮವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ನಲ್ಲಿ ಸಲ್ಲಿಸಲಾಗಿದ್ದ ಪಿಐಎಲ್ ಅರ್ಜಿ ಇಂದು ವಜಾಗೊಂಡಿದೆ.

ಇತ್ತ ಸುಪ್ರೀಂ ಕೋರ್ಟ್ ತೀರ್ಪನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಸ್ವಾಗತಿಸಿದ್ದಾರೆ.

ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಮೈಸೂರು ದಸರಾ ಉದ್ಘಾಟನೆಗೆ ಬೂಕರ್ ಪ್ರಶಸ್ತಿ ವಿಜೇತ ಸಾಹಿತಿ ಬಾನು ಮುಷ್ತಾಕ್ ಅವರನ್ನು ಆಹ್ವಾನಿಸಿದ ರಾಜ್ಯ ಸರ್ಕಾರದ ನಿಲುವಿನ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯನ್ನು ವಜಾಗೊಳಿಸಿರುವ ಸರ್ವೋಚ್ಚ ನ್ಯಾಯಾಲಯದ ತೀರ್ಪನ್ನು ಸ್ವಾಗತಿಸುತ್ತೇನೆ ಎಂದಿದ್ದಾರೆ.

https://x.com/siddaramaiah/status/1968988374771065232?ref_src=twsrc%5Etfw

ಮೈಸೂರು ದಸರಾವನ್ನು ಧಾರ್ಮಿಕ ನೆಲೆಗಟ್ಟಿಗೆ ಸೀಮಿತವಾಗಿಸಲು ಸಾಧ್ಯವಿಲ್ಲ. ಜಾತಿ, ಧರ್ಮಗಳನ್ನು ಮೀರಿ ನಾಡಿನ ಸಮಸ್ತ ಜನರು ಕೂಡಿ ಸಂಭ್ರಮಿಸುವ ಹಬ್ಬವೆಂದು ನಾವು ಮೊದಲಿನಿಂದಲೂ ಹೇಳುತ್ತಾ ಬಂದಿದ್ದೆವು, ಆದರೂ ಇದರ ವಿರುದ್ಧ ವ್ಯವಸ್ಥಿತ ಅಪಪ್ರಚಾರ ನಡೆಸಿ, ಸಮಾಜವನ್ನು ಒಡೆಯುವ ಪ್ರಯತ್ನ ಮಾಡಲಾಯಿತು. ಈಗ ಸುಪ್ರೀಂ ತೀರ್ಪಿನಿಂದ ನಮ್ಮ ಸರ್ಕಾರದ ನಿಲುವಿಗೆ ಮನ್ನಣೆ ದೊರೆತಿದೆ ಎಂದು ಭಾವಿಸುತ್ತೇನೆ ಎಂದು ತಿಳಿಸಿದ್ದಾರೆ.

ಜಾತಿ, ಧರ್ಮಗಳ ವೈಷಮ್ಯ ಬಿತ್ತುವ ವಿಚ್ಛಿದ್ರಕಾರಿ ಮನಸುಗಳಿಗೆ ಇನ್ನಾದರೂ ತಾಯಿ ಚಾಮುಂಡೇಶ್ವರಿ ಸದ್ಬುದ್ದಿ ನೀಡಲಿ ಎಂದು ಆಶಿಸುತ್ತೇನೆ ಎಂದಿದ್ದಾರೆ.

Related articles

Comments

ಇತರರಿಗೂ ಹಂಚಿ

Latest articles

Newsletter

error: Content is protected !!