Sunday, October 12, 2025

ಸೆಲ್ಫಿ ತೆಗೆದುಕೊಳ್ಳಲು ಹೋಗಿ 60 ಅಡಿ ಆಳದ ಪ್ರಪಾತಕ್ಕೆ ಬಿದ್ದು ಶಿಕ್ಷಕ ಸಾವು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪತ್ನಿ ಜೊತೆ ಸೆಲ್ಫಿ ತೆಗೆದುಕೊಳ್ಳಲು ಹೋಗಿ 60 ಅಡಿ ಆಳದ ಪ್ರಪಾತಕ್ಕೆ ಬಿದ್ದು ಶಿಕ್ಷಕ ಸಾವನ್ನಪ್ಪಿದ ದುರ್ಘಟನೆ ಕೆಮ್ಮಣ್ಣುಗುಂಡಿ ಬಳಿ ನಡೆದಿದೆ.

ಮೃತ ಶಿಕ್ಷಕನನ್ನು ಸಂತೋಷ್ (40) ಎಂದು ಗುರುತಿಸಲಾಗಿದೆ. ರಸ್ತೆ ಬದಿ ಪತ್ನಿಯೊಂದಿಗೆ ಸೆಲ್ಫಿ ತೆಗೆದುಕೊಳ್ಳುವಾಗ ಆಯತಪ್ಪಿ ಪ್ರಪಾತಕ್ಕೆ ಬಿದ್ದಿದ್ದಾರೆ. ಬಿದ್ದ ರಭಸಕ್ಕೆ ಅವರ ತಲೆಗೆ ಬಲವಾದ ಗಾಯವಾಗಿ, ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಅಗ್ನಿ ಶಾಮಕದಳದ ಸಿಬ್ಬಂದಿ ಪ್ರಪಾತದಿಂದ ಮೃತದೇಹವನ್ನು ತೆಗೆದಿದ್ದು. ಲಿಂಗದಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

error: Content is protected !!