ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಮೀಕ್ಷೆಗೆ ಬಂದಿದ್ದ ಶಿಕ್ಷಕಿ ಸೇರಿದಂತೆ ಒಟ್ಟು ಏಳು ಜನರ ಮೇಲೆ ಬೀದಿ ನಾಯಿಗಳು ದಾಳಿ ಮಾಡಿ ಗಾಯಗೊಳಿರುವ ಘಟನೆ ಹಾಸನ ಜಿಲ್ಲೆಯ ಬೇಲೂರು ಬೇಲೂರು ಪಟ್ಟಣದ ಜೈಭೀಮ್ ನಗರದಲ್ಲಿ ನಡೆದಿದೆ.
ಶಿಕ್ಷಕಿ ಚಿಕ್ಕಮ್ಮ ಎಂಬುವವರು ಬೀದಿನಾಯಿಗಳ ದಾಳಿಗೆ ಒಳಗಾಗಿ ತೀವ್ರವಾಗಿ ಗಾಯಗೊಂಡಿದ್ದಾರೆ. ಬಡಾವಣೆಯಲ್ಲಿ ನಡೆದುಕೊಂಡು ಬರುತ್ತಿದ್ದ ವೇಳೆ ಏಕಾಏಕಿ ಹತ್ತಕ್ಕೂ ಹೆಚ್ಚು ಬೀದಿ ನಾಯಿಗಳು ದಾಳಿ ಮಾಡಿದ್ದು, ರಕ್ಷಣೆಗೆ ಬಂದ ಜನರನ್ನು ಕಚ್ಚಿ ಗಂಭೀರ ಗಾಯಗೊಳಿಸಿವೆ. ಗಾಯಾಳುಗಳನ್ನು ಬೆಲ್ಲೂರು ಹಾಗೂ ಜಿಲ್ಲಾಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ, ಆಸ್ಪತ್ರೆಗೆ ಶಾಸಕ ಹುಲ್ಲಹಳ್ಳಿ ಸುರೇಶ್ ಹಾಗೂ ಜಿಲ್ಲಾಧಿಕಾರಿ ಕೆ.ಎಸ್ ಲತಾ ಕುಮಾರಿ ಸೇರಿದಂತೆ ಅಧಿಕಾರಿಗಳು ಆಗಮಿಸಿ ಗಾಯಾಳುಗಳನ್ನು ವಿಚಾರಿಸಿದ್ದಾರೆ.
ಸಮೀಕ್ಷೆಗೆ ಬಂದಿದ್ದ ಶಿಕ್ಷಕಿಯ ಮೇಲೆ ಬೀದಿ ನಾಯಿಗಳ ಗ್ಯಾಂಗ್ ದಾಳಿ: ರಕ್ಷಣೆಗೆ ಬಂದವರೂ ಆಸ್ಪತ್ರೆಗೆ
