ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಹುಬ್ಬಳ್ಳಿಯ ಐದು ವರ್ಷದ ಬಾಲಕಿಯ ಕಿಡ್ನಾಪ್, ರೇಪ್ & ಮರ್ಡರ್ ಪ್ರಕರಣ ಹಾಗೂ ಪೊಲೀಸರು ನಡೆಸಿದ್ದ ಆರೋಪಿಯ ಎನ್ಕೌಂಟರ್ ಕೇಸ್ನಲ್ಲಿ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡು ನೊಟೀಸ್ ಜಾರಿ ಮಾಡಿದೆ.
ಹುಬ್ಬಳ್ಳಿಯಲ್ಲಿ ನಡೆದ ಪೊಲೀಸ್ ಎನ್ಕೌಂಟರ್ನಲ್ಲಿ ಬಂಧಿತ ಆರೋಪಿಯ ಸಾವು ಮತ್ತು ಅಪ್ರಾಪ್ತ ಬಾಲಕಿಯ ಅಪಹರಣ, ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮಾಧ್ಯಮ ವರದಿಗೆ ಸಂಬಂಧಿಸಿದಂತೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್ಎಚ್ಆರ್ಸಿ) ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ಮತ್ತು ಪೊಲೀಸ್ ಮಹಾನಿರ್ದೇಶಕರಿಗೆ ನೋಟಿಸ್ ಜಾರಿ ಮಾಡಿದೆ. ಆಯೋಗವು ನಾಲ್ಕು ವಾರಗಳಲ್ಲಿ ವಿವರವಾದ ವರದಿಗಳನ್ನು ಕೇಳಿದೆ.
ಘಟನೆಯ ಬಗ್ಗೆ ಮಾಧ್ಯಮ ವರದಿಗಳನ್ನು ಆಧರಿಸಿ ಎನ್ಎಚ್ಆರ್ಸಿ ಸ್ವಯಂಪ್ರೇರಿತವಾಗಿ ವಿಚಾರಣೆಗೆ ತೆಗೆದುಕೊಂಡಿದೆ.
ವರದಿಯ ವಿಷಯಗಳು ನಿಜವಾಗಿದ್ದರೆ, ಸಂತ್ರಸ್ಥ ಅಪ್ರಾಪ್ತ ಬಾಲಕಿ ಮತ್ತು ಎನ್ಕೌಂಟರ್ನಲ್ಲಿ ಕೊಲ್ಲಲ್ಪಟ್ಟ ಶಂಕಿತ ಅಪರಾಧಿಯ ಮಾನವ ಹಕ್ಕುಗಳ ಗಂಭೀರ ಉಲ್ಲಂಘನೆಯನ್ನು ಎತ್ತಿ ತೋರಿಸುತ್ತವೆ ಎಂದು ಆಯೋಗವು ಗಮನಿಸಿದೆ. ಆದ್ದರಿಂದ, ಆಯೋಗವು ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ಮತ್ತು ಪೊಲೀಸ್ ಮಹಾನಿರ್ದೇಶಕರಿಗೆ ನೊಟೀಸ್ ಜಾರಿ ಮಾಡಿದ್ದು, ನಾಲ್ಕು ವಾರಗಳಲ್ಲಿ ಈ ವಿಷಯದ ಬಗ್ಗೆ ವಿವರವಾದ ವರದಿಯನ್ನು ನೀಡುವಂತೆ ಸೂಚಿಸಿದೆ.