ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರ್ನಾಟಕಕ್ಕೆ ಅನೇಕ ರೈಲ್ವೆ ಯೋಜನೆಗಳ ಕೊಡುಗೆ ನೀಡಿರುವ ಕೇಂದ್ರ ಸರ್ಕಾರ, ಇದೀಗ ಗಣೇಶ ಹಬ್ಬದ ವೇಳೆ ಮತ್ತೊಂದು ವಿಶೇಷ ಕೊಡುಗೆ ನೀಡಿದ್ದು, ಹುಬ್ಬಳ್ಳಿ-ಜೋಧಪುರ್ ನೇರ ರೈಲು ಸಂಚಾರಕ್ಕೆ ಅಸ್ತು ಎಂದಿದೆ.
ಹುಬ್ಬಳ್ಳಿ-ಜೋಧಪುರ್ ವಿಶೇಷ ರೈಲು ಸೆಪ್ಟೆಂಬರ್ ತಿಂಗಳಿನಿಂದಲೇ ಸಂಚಾರ ಪ್ರಾರಂಭಿಸಲಿದೆ. ಪ್ರಸ್ತುತ ವಿಶೇಷ ರೈಲಾಗಿರುವ ಇದನ್ನು ಮುಂದಿನ ದಿನಗಳಲ್ಲಿ ನಿಯತಕಾಲಿಕವಾಗಿ ಪರಿವರ್ತನೆಗೊಳಿಸುವ ಬಗ್ಗೆ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಭರವಸೆ ನೀಡಿದ್ದಾರೆಂದು ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದ್ದಾರೆ.
ಹುಬ್ಬಳ್ಳಿ-ಜೋಧಪುರ್ ನೂತನ ರೈಲು (ಸಂಖ್ಯೆ: 07359) ಹುಬ್ಬಳ್ಳಿಯಿಂದ ಸಂಜೆ 7:30ಕ್ಕೆ ತೆರಳಿ BGKTಗೆ ಬೆಳಿಗ್ಗೆ 5:30ಕ್ಕೆ ತಲುಪಲಿದೆ. ಸದ್ಯ ಪ್ರತಿ ರವಿವಾರ ಈ ರೈಲು ಸಂಚಾರವಿರಲಿದ್ದು, ಸೆಪ್ಟೆಂಬರ್ 28ರಿಂದ ಸಂಚಾರ ಆರಂಭಿಸಲಿದೆ.
ಹುಬ್ಬಳ್ಳಿ-ಜೋಧಪುರ್ ನೇರ ರೈಲು ಸಂಚಾರಕ್ಕೆ ಅಸ್ತು : ಟಿಕೆಟ್ ಬುಕ್ಕಿಂಗ್ ಶುರು
