Saturday, September 6, 2025

ಹುಬ್ಬಳ್ಳಿಯ ನೇಹಾ ಹಿರೇಮಠ ಕೊಲೆ ಕೇಸ್: ಆರೋಪಿಯ ಜಾಮೀನು ಅರ್ಜಿ ವಜಾ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಹುಬ್ಬಳ್ಳಿಯ ನೇಹಾ ಹಿರೇಮಠ ಕೊಲೆ ಪ್ರಕರಣದ ಆರೋಪಿ ಫಯಾಜ್ ಜಾಮೀನು ಅರ್ಜಿಯನ್ನು ಧಾರವಾಡ ಹೈಕೋರ್ಟ್​ ಪೀಠ ವಜಾಗೊಳಿಸಿದೆ.

2024ರ ಏಪ್ರಿಲ್ 18ರಂದು ನಡೆದಿದ್ದ ನೇಹಾ ಹಿರೇಮಠ ಕೊಲೆ ಪ್ರಕರಣದ ಆರೋಪಿ ಫಯಾಜ್ ಜಾಮೀನು ಅರ್ಜಿಯನ್ನು ಹುಬ್ಬಳ್ಳಿಯ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಸಹ ತಿರಸ್ಕೃತಗೊಳಿಸಿತ್ತು. ಇದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಜಾಮೀನು ಅರ್ಜಿಯನ್ನು ಧಾರವಾಡ ಹೈಕೋರ್ಟ್ ಸಹ ವಜಾಗೊಳಿಸಿ ಆದೇಶ ಹೊರಡಿಸಿದೆ.

2024ರ ಏಪ್ರಿಲ್ 18ರಂದು ಹುಬ್ಬಳ್ಳಿಯ ಬಿವಿಬಿ ಕಾಲೇಜಿನಲ್ಲಿ ವಿದ್ಯಾರ್ಥಿನಿ ನೇಹಾಳನ್ನು ಫಯಾಜ್ ಚಾಕುವಿನಿಂದ ಇರಿದು ಕೊಲೆ ಮಾಡಿದ್ದನು.

ಇದನ್ನೂ ಓದಿ