Monday, November 3, 2025

ಹುಬ್ಬಳ್ಳಿ ನೇಹಾ ಹಿರೇಮಠ ಹತ್ಯೆ ಪ್ರಕರಣ: ಸೆ. 12ಕ್ಕೆ ವಿಚಾರಣೆ ಮುಂದೂಡಿಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಹುಬ್ಬಳ್ಳಿ ನೇಹಾ ಹಿರೇಮಠ ಹತ್ಯೆ ಪ್ರಕರಣದ ಆರೋಪಿ ಫಯಾಜ್ ವೀಡಿಯೋ ಕಾನ್ಫರೆನ್ಸ್ ಮೂಲಕ ಇಂದು ವಿಚಾರಣೆಗೆ ಹಾಜರಾಗಿದ್ದಾನೆ. ವಿಚಾರಣೆ ವೇಳೆ ಆರೋಪಿ ಫಯಾಜ್ ಪರ ವಕೀಲರು ಸಲ್ಲಿಸಿದ್ದ ಕಾಲ್ ಡಿಟೇಲ್ಸ್ ಲಿಸ್ಟ್‌ಗಾಗಿ ಕೋರಿದ ಅರ್ಜಿಯನ್ನು ನ್ಯಾಯಾಲಯವು ತಿರಸ್ಕರಿಸಿದೆ.

ಇದೇ ವೇಳೆ, ನೇಹಾ ತಂದೆ, ತಾಯಿ ಹಾಗೂ ನಿರಂಜನ್ ಹಿರೇಮಠರ ಕಾರು ಚಾಲಕನ ಕಾಲ್ ಡಿಟೇಲ್ಸ್‌ ಕೊಡುವಂತೆ ಫಯಾಜ್ ಪರ ವಕೀಲರು ಸಲ್ಲಿಸಲಾಗಿದ್ದ ಅರ್ಜಿಯನ್ನೂ ನ್ಯಾಯಾಧೀಶರು ವಿಚಾರಣೆ ನಡೆಸಿ ತಿರಸ್ಕರಿಸಿದ್ದಾರೆ. ಮುಂದಿನ ವಿಚಾರಣೆಯ ದಿನಾಂಕವಾದ ಸೆಪ್ಟೆಂಬರ್ 12 ರಂದು ಟ್ರಯಲ್‌ಗೆ ನಿಗದಿತ ದಿನಾಂಕವನ್ನು ಪ್ರಕಟಿಸಲಾಗುವುದು ಎಂದು ನ್ಯಾಯಾಲಯ ತಿಳಿಸಿದೆ.

2024ರ ಏಪ್ರಿಲ್ 18ರಂದು ಹುಬ್ಬಳ್ಳಿಯ ಕಾಲೇಜು ಆವರಣದಲ್ಲಿ 23 ವರ್ಷದ ವಿದ್ಯಾರ್ಥಿನಿ ನೇಹಾ ಹಿರೇಮಠಳನ್ನು ಆರೋಪಿ ಫಯಾಜ್ ಚೂರಿಯಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿದ್ದ ಘಟನೆ ರಾಜ್ಯದಾದ್ಯಂತ ಸಂಚಲನ ಮೂಡಿಸಿತ್ತು. ಹತ್ಯೆ ಪ್ರಕರರಣದಿಂದ ರಾಜ್ಯಾದ್ಯಂತ ತೀವ್ರ ಪ್ರತಿಭಟನೆಗಳು ನಡೆದಿದ್ದವು.

error: Content is protected !!