Tuesday, March 28, 2023

Latest Posts

ಹುಬ್ಬಳ್ಳಿ-ಅಂಕೋಲಾ ರೈಲ್ವೆ ಯೋಜನೆ, ಕೇಂದ್ರದ ಸಕಾರಾತ್ಮಕ ಚಿಂತನೆ : ಮಾಜಿ ಸಿಎಂ ಜಗದೀಶ ಶೆಟ್ಟರ್

ಹೊಸದಿಗಂತ ವರದಿ ಹುಬ್ಬಳ್ಳಿ :

ಹುಬ್ಬಳ್ಳಿ-ಅಂಕೋಲಾ ರೈಲ್ವೆ ಅಭಿವೃದ್ಧಿಗೆ ಯೋಜನೆ ಬಗ್ಗೆ ಸಕಾರಾತ್ಮಕ ವರದಿಗಳು ಹಾಗೂ ಹಲವರಿಂದ ಉತ್ತಮ ಸಲಹೆಗಳು ಸಹ ಬಂದಿವೆ. ವರದಿಯನ್ನು ಮುಂದಿನ ಮಂಡಳಿ ಸಭೆಗೆ ನೀಡಲು ಸೂಚಿಸಲಾಗಿದ್ದು, ಇದು ಉತ್ತಮ ಬೆಳವಣಿಗೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಹೇಳಿದರು.

ಬುಧವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಯೋಜನೆ ಬಗ್ಗೆ ಅಷ್ಟೊಂದು ಸ್ಪಂದನೆ ಸಿಕ್ಕಿದ್ದಿಲ್ಲ. ಕೇಂದ್ರ ಸರ್ಕಾರ ಇದರ ಜವಾಬ್ದಾರಿ ವಹಿಸಿಕೊಂಡ ಬಳಿಕ ಕಮಿಟಿ ಸಹ ರಾಜ್ಯದ ವಿವಿಧ ಪ್ರದೇಶ ಭೇಟಿ ನೀಡಿ ಪರಿಶೀಲನೆ ಸಹ ನಡೆಸಿದೆ. ಯೋಜನೆ ಪರವಾದ ವರದಿಗಳು ಬಂದಿವೆ ಎಂದರು.

ಕೇಂದ್ರ ಸಚಿವರ ಜೊತೆ ಹಲವಾರು ಬಾರಿ ನಾನು ಈ ವಿಷಯದ ಕುರಿತು ಮಾತನಾಡಿದ್ದೇನೆ. ಅದಕ್ಕೆ ಪೂರಕವಾದ ಕಾರ್ಯಗಳು ನಡೆಯುತ್ತಿವೆ. ಕೇಂದ್ರ ಸರ್ಕಾರದಿಂದ ಪೂರಕವಾದ ಸ್ಪಂದನೆ ದೊರೆಯುತ್ತಿದೆ ಎಂದು ತಿಳಿಸಿದರು.

ಜೆಡಿಎಸ್ ನಾಯಕ ಎಚ್.ಡಿ. ಕುಮಾರಸ್ವಾಮಿ ಅವರು ಎರಡು ಬಾರಿ ಮುಖ್ಯಮಂತ್ರಿ ಆಗಿದ್ದವರು. ರಾಜಕಾರಣದಲ್ಲಿ ವೈಯಕ್ತಿಕ ಮತ್ತು ಜಾತಿ ವಿಷಯಗಳ ಕುರಿತು ಮಾತನಾಡುವುದು ಸರಿಯಲ್ಲ. ಬ್ರಾಹ್ಮಣರ ಬಗ್ಗೆ ಅವರು ಹಗುರವಾಗಿ ಮಾತನಾಡುವುದು ಅವರಿಗೆ ಶೋಭೆ ತರುವಂತದ್ದಲ್ಲ ಎಂದು ಹೇಳಿದರು.

ಕೇಂದ್ರ ಸಚಿವ ಜೋಶಿ ಅವರು ಕಚೇರಿ ದುರ್ಬಳಕೆ ಕುರಿತು ಪ್ರತಿಕ್ರಿಯಿಸಿದ ಅವರು, ಆರೋಪ ಮಾಡುವ ಬದಲು ದಾಖಲೆಗಳಿದ್ದರೆ ದೂರು ಸಲ್ಲಿಸಲಿ. ಹಿಂದೆ ಅನೇಕರು ಸಚಿವರ ಬಗ್ಗೆ ಆರೋಪ ಮಾಡಿದ್ದರು. ಆದರೆ ಏನು ಪ್ರಯೋಜವಾಗಿಲ್ಲ. ಇಲ್ಲಸಲ್ಲದ ಆರೋಪ ಮಾಡುವುದು ಸರಿಯಲ್ಲ ಎಂದರು.

ಉತ್ತರ ಕರ್ನಾಟಕ ಅಭಿವೃದ್ಧಿಗೆ ಮಾತ್ರವಲ್ಲದೆ ರಾಜ್ಯದ ಅಭಿವೃದ್ಧಿಗೆ ಪೂರಕವಾದ ಬಜೆಟ್ ಇದಾಗಲಿದೆ. ಈ ಭಾಗಕ್ಕೆ ಅವಶ್ಯಕತೆ ಇರುವ ಅನುದಾನದ ಬಗ್ಗೆ ಉಲ್ಲೇಖ ಮಾಡುವ ಮೂಲಕ ರಾಜ್ಯ ನಾಯಕರ ಜೊತೆಗೆ ಸಮಾಲೋಚನೆ ನಡೆಸಲಾಗುತ್ತದೆ ಎಂದು ರಾಜ್ಯ ಬಜೆಟ್ ಕುರಿತ ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯೆ ನೀಡಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!