ಹುಬ್ಬಳ್ಳಿ ಸಿಲಿಂಡರ್ ಸ್ಪೋಟ: ಮತ್ತೊಬ್ಬ ಅಯ್ಯಪ್ಪ ಮಾಲಾಧಾರಿ ಸಾವು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಹುಬ್ಬಳ್ಳಿ ಜಿಲ್ಲೆಯಲ್ಲಿ ದೇವಸ್ಥಾನವೊಂದರಲ್ಲಿ ನಡೆದ ಗ್ಯಾಸ್ ಸಿಲಿಂಡರ್ ಸ್ಪೋಟ ದುರಂತದಲ್ಲಿ 9 ಅಯ್ಯಪ್ಪ ಮಾಲಾಧಾರಿಗಳು ಗಾಯಗೊಂಡಿದ್ದರು. ಇವರನ್ನು ಕಿಮ್ಸ್ ಆಸ್ಪತ್ರೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಇಂದು ಮತ್ತೊಬ್ಬ ಅಯ್ಯಪ್ಪ ಮಾಲಾಧಾರಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದು, ಮೃತರ ಸಂಖ್ಯೆ 7ಕ್ಕೆ ಏರಿಕೆಯಾಗಿದೆ.

ಹುಬ್ಬಳ್ಳಿಯ ಸಾಯಿ ನಗರದ ಈಶ್ವರದೇವಸ್ಥಾನದಲ್ಲಿ ಅಡುಗೆ ಮಾಡುತ್ತಿದ್ದ ಸಂದರ್ಭದಲ್ಲಿ ಡಿಸೆಂಬರ್.22ರಂದು ಸಿಲಿಂಡರ್ ಸ್ಪೋಟಗೊಂಡು 9 ಅಯ್ಯಪ್ಪ ಮಾಲಾಧಾರಿಗಳು ಗಾಯಗೊಂಡಿದ್ದರು. ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಂತ ಅಯ್ಯಪ್ಪ ಮಾಲಾಧಾರಿ ತೇಜಸ್ ಸುತಾರೆ ಎಂಬುವರು ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ. ಹೀಗಾಗಿ ಮೃತರ ಸಂಖ್ಯೆ 7ಕ್ಕೆ ಏರಿಕೆಯಾದಂತೆ ಆಗಿದೆ.

ಈಗಾಗಲೇ ಮೃತ ಅಯ್ಯಪ್ಪ ಮಾಲಾಧಾರಿಗಳ ಕುಟುಂಬಕ್ಕೆ ರಾಜ್ಯ ಸರ್ಕಾರದಿಂದ ತಲಾ 5 ಲಕ್ಷ ಪರಿಹಾರವನ್ನು ಘೋಷಣೆ ಮಾಡಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!