Monday, September 26, 2022

Latest Posts

ಹುಬ್ಬಳ್ಳಿ: ಅತಿಥಿ ಉಪನ್ಯಾಸಕರಿಗೆ ಜೀವನ ಭದ್ರತೆ ಒದಗಿಸಲು ಆಗ್ರಹ

ಹೊಸದಿಗಂತ ವರದಿ, ಹುಬ್ಬಳ್ಳಿ:
ಸರ್ಕಾರಿ ಪ್ರಥಮ‌ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರಿಗೆ ಜೀವನ‌ ನಿರ್ವಾಹಣ ಭದ್ರತೆ ಹಾಗೂ ವಿವಿಧ ಬೇಡಿಕೆ ಈಡೇರಿಸಬೇಕು ಎಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕ ಸಂಘದ ರಾಜ್ಯಾಧ್ಯಕ್ಷ ಡಾ. ಹನುಮಂತಗೌಡ ಆರ್. ಕಲ್ಮನಿ ಹೇಳಿದರು.
ಕಳೆದ 10 ವರ್ಷದಿಂದ ಅತಿಥಿ ಶಿಕ್ಷಕರು ವಿದ್ಯಾರ್ಥಿಗಳಿಗಾಗಿ ತಮ್ಮ ಜೀವನ ಮುಡಿಪಾಗಿಟ್ಟಿದ್ದಾರೆ. ಸರ್ಕಾರ ನೀಡುತ್ತಿರುವ ಕಡಿಮೆ ಸಂಬಳದಲ್ಲಿ ಜೀವನ ಸಾಗಿಸುತ್ತಿದ್ದು, ಯಾವುದೇ ಜೀವನ ಭದ್ರತೆ ದೊರೆಯುತ್ತಿಲ್ಲ ಎಂದು ನಗರದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಇತ್ತೀಚೆಗೆ ನಿಧರಾದ ರಾಜ್ಯ ಪ್ರಧಾನ ಕಾರ್ಯದರ್ಶಿ ಶಿವಾನಂದ‌ ಕಲ್ಲೂರ, ಶಿವಮೊಗ್ಗದ ಹರ್ಷಾ, ಹುಬ್ಬಳ್ಳಿಯ ಶ್ರೇಯಾಂಕಾ ಪಾಟೀಲ ಅವರ ಕುಟುಂಬಕ್ಕೆ ತಲಾ 50 ಲಕ್ಷ ಪರಿಹಾರ ಸೆ. 5 ರಂದು ಶಿಕ್ಷಕರ‌ ದಿನಾಚರಣೆಯ ದಿನ ನೀಡಬೇಕು ಎಂದು ಆಗ್ರಹಿಸಿದರು.
ಬೇರೆ ಯಾರಿಗೂ ಪರಿಹಾರದ ನೀಡುವ ಸರ್ಕಾರ ಸಮಾಜ ನಿರ್ಮಾಣ ಮಾಡುವ ಅತಿಥಿ ಉಪನ್ಯಾಸಕರಿಗೆ ಜೀವನ ಭದ್ರತೆ ನೀಡುತ್ತಿಲ್ಲ. ಸರ್ಕಾರ ನಮ್ಮ ಬೇಡಿಕೆ ಹಾಗೂ ಮೃತರ ಕುಟುಂಬಕ್ಕೆ ಪರಿಹಾರ ನೀಡದಿದ್ದರೇ ಬೆಳಗಾವಿಯಲ್ಲಿ ನಡೆದ ಹೋರಾಟ ಮತ್ತೇ ಮುಂದುವರಿಯುತ್ತದೆ ಎಂದು ಎಚ್ಚರಿಸಿದರು.
ಪ್ರಧಾನ ಕಾರ್ಯದರ್ಶಿ ಪ್ರೊ. ಪೀಟರ್, ಚಂದ್ರಶೇಖರ ಕಾಳನ್ನವರ, ವಿಜಯಲಕ್ಷ್ಮಿ ಜೋಶಿ, ಲೀಲಾವತಿ ಹಿರೇಮಠ ಇದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!