Friday, August 19, 2022

Latest Posts

ಉದಯಪುರ ಹಿಂದು ಹತ್ಯೆ ಖಂಡಿಸಿ ಹುಬ್ಬಳ್ಳಿ-ಧಾರವಾಡ ಬಿಜೆಪಿ ಯುವ ಮೋರ್ಚಾದಿಂದ ಪ್ರತಿಭಟನೆ

ಹೊಸದಿಗಂತ ವರದಿ,ಹುಬ್ಬಳ್ಳಿ:

ರಾಜಸ್ಥಾನ ಉದಯಪುರದ ಟೇಲರ್ ಕನ್ಹಯ ಲಾಲ್ ಹತ್ಯೆ ಖಂಡಿಸಿ ಬಿಜೆಪಿ ಹು-ಧಾ ಮಹಾನಗರದ ಜಿಲ್ಲಾ ಯುವ ಮೋರ್ಚಾ ವತಿಯಿಂದ ಬುಧವಾರ ನಗರದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.

ಇಸ್ಲಾಂ ಭಯೋತ್ಪಾದಕರಿಗೆ, ಜಿಹಾದಿಗಳಿಗೆ ಕುಮ್ಮಕ್ಕು ನೀಡುತ್ತಿರುವ ರಾಜಸ್ಥಾನ ಕಾಂಗ್ರೆಸ್ ಸರ್ಕಾರಕ್ಕೆ, ಜಿಹಾದಿ ಹೇಡಿಗಳಿಗೆ ಧಿಕ್ಕಾರ ಧಿಕ್ಕಾರ ಎಂಬ ಘೋಷಣೆ ಮತ್ತು ಬಿತ್ತಿ ಪತ್ರ ಹಿಡಿದು ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯ ಪ್ರಧಾನ‌ ಕಾರ್ಯದರ್ಶಿ ಮಹೇಶ ಟೆಂಗಿನಕಾಯಿ ಮಾತನಾಡಿ, ಹೇಯ ಕೃತ್ಯ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆಗೆ ಕರೆ ನೀಡಲಾಗಿದೆ. ಇಸ್ಲಾಂ ಮೂಲಭೂತವಾದಿ ವ್ಯಕ್ತಿಗಳು ಭಯೋತ್ಪಾದನೆ ಮಾಡುವುದಕ್ಕೆ ಹೇಸುವುದಿಲ್ಲ.ಇಂತವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದರು.

ಜಿಲ್ಲಾ ಪ್ರಧಾನ ಕಾರ್ಯದರ್ಶಿ ದತ್ತಮೂರ್ತಿ ಕುಲಕರ್ಣಿ ಮಾತನಾಡಿ, ಉದಯಪುರದಲ್ಲಿ ಹಿಂದೂ ಕಾರ್ಯಕರ್ತ ಹತ್ಯೆಯನ್ನು ಬಿಜೆಪಿ ಖಂಡೀಸುತ್ತದೆ. ಇಂತಹ ಕೃತ್ಯ ವೆಸಗುವ ದುಷ್ಕರ್ಮಿಗಳನ್ನು ಸಾರ್ವಜನಿಕರ ಒಪ್ಪಿಸಬೇಕು. ಮುಂದೆ ಈ ರೀತಿಯಾಗದಂತೆ ನೋಡಿಕೊಳ್ಳಬೇಕು ಎಂದು ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಆಗ್ರಹಿಸುತ್ತೇನೆ ಎಂದರು.

ಮಹಾನಗರ ಜಿಲ್ಲಾಧ್ಯಕ್ಷ ಸಂಜಯ ಕಪಟ್ಕರ್, ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಪ್ರೀತಮ್ ನಾಯಕ, ಅಶೋಕ ಕಾಟವೆ,ನಾರಾಯಣ ಜರತಾರಘರ, ಪ್ರಭು ನವಲಗುಂದಮಠ, ರಂಗಾ ಬದ್ದಿ, ರವಿ ನಾಯಕ, ವಿನಯ ಸಜ್ಜನರ, ಪ್ರಕಾಶ ಶೃಗೇರಿ,ರೇಣುಕಾ ಇಳಕಲ್ಲ ಇದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!