ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..
ಹೊಸದಿಗಂತ ವರದಿ, ಧಾರವಾಡ:
ಇಲ್ಲಿನ ಕೃಷಿ ವಿವಿಯ ಮುಖ್ಯ ಕಟ್ಟಡದಲ್ಲಿ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ 82 ವಾರ್ಡ್ ಗಳ ಮತ ಎಣಿಕೆ ಕಾರ್ಯ ಆರಂಭಗೊಂಡಿದೆ.
ಜಿಲ್ಲಾ ಚುನಾವಣಾಧಿಕಾರಿ ನಿತೇಶ ಪಾಟೀಲ ಅವರು, ಅಭ್ಯರ್ಥಿಗಳ ಸಮ್ಮುಖದಲ್ಲಿ ಸ್ಟ್ರಾಂಗ್ ರೂಮ್ ಭೀಗ ತೆರೆದ ನಂತರ ಸಿಬ್ಬಂದಿ ಎಣಿಕಾ ಕೇಂದ್ರಕ್ಕೆ ಮತಯಂತ್ರ ಸಾಗಿಸಿದೆ.
ಕೃಷಿ ವಿವಿಯ ಮುಖ್ಯ ಕಟ್ಟಡದ ನೆಲಮಹಡಿ ಹಾಗೂ ಮೊದಲ ಮಹಡಿ ಸೇರಿ ಒಟ್ಟು ಆರು ಕೊಠಡಿಗಳಲ್ಲಿ ಎಣಿಕೆ ಕಾರ್ಯ ನಡೆದಿದ್ದು, 10 ಸುತ್ತುಗಳಲ್ಲಿ ಮತ ಎಣಿಕೆ ನಡೆಯಲಿದೆ.
ಎಂಟನೇ ವಾರ್ಡ್ ನಲ್ಲಿ ಬಿಜೆಪಿ ಅಭ್ಯರ್ಥಿ 196 ಮತಗಳ ಅಂತರದ ಮುನ್ನಡೆ ಸಾಧಿಸಿದ್ದು, ಕಾಂಗ್ರೆಸ್ ಅಭ್ಯರ್ಥಿ ಹಿನ್ನಡೆಯಲ್ಲಿದ್ದಾರೆ..