Thursday, October 6, 2022

Latest Posts

ಹುಬ್ಬಳ್ಳಿ: ಪ್ರವಾಹಕ್ಕೆ 250 ಕ್ಕೂ ಹೆಚ್ಚು ಮನೆಗಳು ಮುಳುಗಡೆ; ಸಚಿವ ಶಂಕರ ಪಾಟೀಲ ಪರಿಶೀಲನೆ

ಹೊಸದಿಗಂತ ವರದಿ, ಹುಬ್ಬಳ್ಳಿ:
ತಾಲೂಕಿನಲ್ಲಿ ಸೋಮವಾರ ರಾತ್ರಿ ದಾರಾಕಾಳ ಮಳೆ ಸುರಿದ ಪರಿಣಾಮ ಕಿರೇಸೂರ ಗ್ರಾಮದಲ್ಲಿ ಬೆಣ್ಣೆ ಹಳ್ಳದ ಪ್ರವಾಹದಿಂದ ಮನೆಗಳು ಮುಳುಗಡೆಯಾಗಿದ್ದು, ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಪರಿಹಾರ ಒದಗಿಸಲು ಭರವಸೆ ನೀಡಿದರು.
ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವರು, ನಿರಂತರ ಮಳೆಯಾದ ಹಿನ್ನೆಲೆ ತಾಲೂಕಿನ ಕಿರೇಸೂರ, ಹೆಬಸೂರ ಹಾಗೂ ಇಂಗಳಹಳ್ಳಿ ಗ್ರಾಮದಲ್ಲಿ ಪ್ರವಾಹದಿಂದ ಸಾಕಷ್ಟು ಮನೆಗಳು ಮುಳುಗಡೆಯಾಗಿವೆ. ಈಗಾಗಲೇ ಜಿಲ್ಲಾಡಳಿತ ಹಾಗೂ ತಾಲೂಕು ಆಡಳಿತ ಗ್ರಾಮಗಳಿಗೆ ಭೇಟಿ ನೀಡಿ ಪರಿಶೀಲಿಸಿ ಗಂಜಿ ಕೇಂದ್ರಗಳನ್ನು ಆರಂಭಿಸಲಾಗಿದೆ ಎಂದರು.
ಪ್ರವಾಹದಿಂದ ಕಿರೇಸೂರ ಗ್ರಾಮದ ವಿಟೋಬಾ ನಗರದ ಪ್ಲಾಟ್ ಸಂಪೂರ್ಣ ಮುಳುಗಡೆಯಾಗಿದೆ. ಗ್ರಾಮದ ಸುಮಾರು 250 ಕ್ಕೂ ಹೆಚ್ಚು ಮನೆಗಳು ಸಂಪೂರ್ಣ ಮುಳುಗಡೆಯಾಗಿದೆ. ಗ್ರಾಮಸ್ಥರು ರಾತ್ರಿಯಲ್ಲ ನಿದ್ದೆಯಿಲ್ಲ ಪರದಾಡುವ ಸ್ಥಿತಿ ನಿರ್ಮಾಣವಾಗಿತ್ತು. ಅಧಿಕಾರಿಗಳು ಗ್ರಾಮಸ್ಥರ ಸಹಾಯದಿಂದ ಜನರನ್ನು ಸುರಕ್ಷಿತ ಸ್ಥಳಕ್ಕೆ ಕರೆತರಲಾಗಿದೆ ಎಂದು ತಿಳಿಸಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!