ಹುಬ್ಬಳ್ಳಿ ಗಲಭೆ ಕೇಸ್ ವಾಪಸ್.. ಸರ್ಕಾರದ ವಿರುದ್ಧ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ

ಹೊಸದಿಗಂತ ಹುಬ್ಬಳ್ಳಿ:

ಹಳೇ ಹುಬ್ಬಳ್ಳಿ ಗಲಭೆ ಪ್ರಕರಣವನ್ನು‌ ಯಾವುದೇ ಕಾರಣಕ್ಕೂ ಹಿಂಪಡೆಯಬಾರದು ಹಾಗೂ ಶಾಸಕ ವಿನಯ ಕುಲಕರ್ಣಿ ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂದು ಆಗ್ರಹಿಸಿ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿದರು.

ಇಲ್ಲಿಯ ಗೋಕುಲ ರಸ್ತೆ ಅಕ್ಷಯ ಪಾಕ್೯ ವೃತ್ತದಲ್ಲಿ ಸಮಾವೇಶಗೊಂಡ ಪ್ರತಿಭಟನಾಕಾರರು ರಸ್ತೆ ತಡೆದು ಪ್ರತಿಭಟನೆ ನಡೆಸಿದರು. ರಾಜ್ಯ ಸರ್ಕಾರ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅಲ್ಪಸಂಖ್ಯಾತರ ಓಲೈಕೆ ಮಾಡುತ್ತಿದೆ. ಯಾವುದೇ ಕಾರಣಕ್ಕೂ ಹಳೇ ಹುಬ್ಬಳ್ಳಿ ಗಲಭೆ ಪ್ರಕರಣವನ್ನು ಹಿಂಪಡೆಯಬಾರದು ಎಂದು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಶಾಸಕ ಮಹೇಶ ಟೆಂಗಿನಕಾಯಿ ಹಾಗೂ ಜಿಲ್ಲಾಧ್ಯಕ್ಷ ತಿಪ್ಪಣ್ಣ ಮಜ್ಜಗಿ ಅವರ ನೇತೃತ್ವದಲ್ಲಿ ಗಲಭೆ ಪ್ರಕರಣ ಹಿಂಪಡೆಯದಂತೆ ಹಾಗೂ ವಿನಯ ಕುಲಕರ್ಣಿ ಪ್ರಕರಣ ಸಿಬಿಐಗೆ ವಹಿಸಲು ಮನವಿ ಸಲ್ಲಿಸಲು ನಿರ್ಧರಿಸಲಾಗಿತ್ತು. ಇದಕ್ಕೆ ಅನುಮತಿ ನೀಡದ ಕಾರಣ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಸಿಎಂ ಕಾರಿಗೆ ಮುತ್ತಿಗೆ ಹಾಕಲು ಮುಂದಾಗಿದ್ದರು. ಈ ವೇಳೆ ಪೊಲೀಸರು ಶಾಸಕರಾದ ಅರವಿಂದ ಬೆಲ್ಲದ, ಮಹೇಶ ಟೆಂಗಿನಕಾಯಿ ಸೇರಿದಂತೆ ಬಿಜೆಪಿ ನಾಯಕರು ಹಾಗೂ ಕಾರ್ಯಕರ್ತರನ್ನು ವಶಕ್ಕೆ ಪಡೆದು ನಗರದ‌ ಹಳೇ ಸಿಆರ್ ಮೈದಾನಕ್ಕೆ ಕರೆಯ್ದೊದರು.
ಬಳಿಕ ಪೊಲೀಸರು ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು. ಪೂರ್ವ ಕ್ಷೇತ್ರದ ಅಧ್ಯಕ್ಷ ಪ್ರಭು ನವಲಗುಂದ ಮಠ, ಮೋಹನ ಹಿರೇಮನಿ, ರವಿ ನಾಯಕ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!