ಹುಬ್ಬಳ್ಳಿ: ನ.5ಕ್ಕೆ ಸಾರಿಗೆ ರತ್ನ ಪ್ರಶಸ್ತಿ ಪ್ರದಾನ‌ ಸಮಾರಂಭ

ಹೊಸದಿಗಂತ ವರದಿ, ಹುಬ್ಬಳ್ಳಿ:
ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ನಿಗಮಗಳ ನೌಕರರ ಕ್ಷೇಮಾಭಿವೃದ್ಧಿ ಸಂಘ ವತಿಯಿಂದ ನ. 5 ರಂದು ಬೆಳಿಗ್ಗೆ ಆರ್.ಎನ್.ಶೆಟ್ಟಿ ಕಲ್ಯಾಣ ಮಂಟಪದಲ್ಲಿ ಸಾರಿಗೆ ರತ್ನ ಪ್ರಶಸ್ತಿ ಪ್ರದಾನ‌ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ವಾಯವ್ಯ ಕೇಂದ್ರ ಸಮಿತಿ ಅಧ್ಯಕ್ಷ ಡಿ. ಪ್ರಸಾದ ಹೇಳಿದರು.
ನಗರದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂವಿಧಾನ ಶಿಲ್ಪಿ ಬಿ.ಆರ್. ಅಂಬೇಡ್ಕರ್ ರವರ 131 ನೇ ಜಯಂತಿಯ ಅಂಗವಾಗಿ ಈ ಪ್ರಶಸ್ತಿ ಪ್ರದಾನ ಸಮಾರಂಭ ಕಳೆದ ಹಲವು ವರ್ಷದಿಂದ ನಡೆಸಿಕೊಂಡು ಬರಲಾಗುತ್ತಿದೆ ಎಂದರು.
ಈ ವರ್ಷ ಮೂರು ಕ್ಷೇತ್ರದ ಸಾಧಕರಾದ ಹಿರಿಯ ಪತ್ರಕರ್ತ ಗಣಪತಿ ಗಂಗೊಳಿ, ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟದ ಸಂಸ್ಥಾಪಕ ರಾಜ್ಯಾಧ್ಯಕ್ಷ ಚಂದ್ರಶೇಖರ ಆರ್., ಗದಗ ಬಿಜೆಪಿ ಯುವ ಮಹೇಶ ದಾಸರ ಅವರಿಗೆ ಪ್ರಶಸ್ತಿ ನೀಡಲಾಗುತ್ತಿದೆ ಎಂದು ತಿಳಿಸಿದರು.
ಈ ಸಮಾರಂಭಕ್ಕೆ ಉದ್ಘಾಟಕರಾಗಿ ಶಾಸಕ ಪ್ರಸಾದ ಅಬ್ಬಯ್ಯ, ಅಧ್ಯಕ್ಷತೆ ಸಂಘದ ರಾಜ್ಯಧ್ಯಕ್ಷ ಡಾ.‌ಎಂ‌. ವೆಂಕಟಸ್ವಾಮಿ, ಎನ್.ಡಬ್ಲ್ಯೂ.ಕೆ.ಎಸ್.ಆರ್.ಟಿ.ಸಿ ಭರತ ಎಸ್., ಎಸಿಪಿ ವಿನೋದ ಮುಕ್ತೆದಾರ, ಎನ್.ಡಬ್ಲ್ಯೂ.ಕೆ.ಎಸ್.ಆರ್.ಟಿ.ಸಿ ಮುಖ್ಯ ಸಂಚಾರಿ ವ್ಯವಸ್ಥಾಪಕ ರಾಜೇಶ ಹುದ್ದಾರ, ಎಂ.ಲಗುಮಯ್ಯ ಅವರ ಭಾಗವಹಿಸುವರು.
ರಾಜ್ಯ ಉಪಾಧ್ಯಕ್ಷ ಎಲ್. ಮನಮೋಹ, ಜಂಟಿ ಕಾರ್ಯದರ್ಶಿ ಮಂಜುಳಾ ನಾಯಕ, ಭಾಗ್ಯೋದಯ ಭಜಂತ್ರಿ, ಶಶಿಕಲಾ ಆರ್. ಇದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!