ಹೊಸದಿಗಂತ ವರದಿ ಹುಬ್ಬಳ್ಳಿ:
ನಗರದ ಜಗದ್ಗುರು ಮೂರುಸಾವಿರ ಮಠ ವಿದ್ಯಾವರ್ಧಕ ಸಂಘದ ಮಹಿಳಾ ಪದವಿ ಪೂರ್ವ ಕಲಾ ಹಾಗೂ ವಾಣಿಜ್ಯ ಕಾಲೇಜಿನ ದ್ವಿತೀಯ ಪಿಯುಸಿ ಕಲಾ ವಿಭಾಗದ ವಿದ್ಯಾರ್ಥಿನಿ ಸಾನಿಕಾ ರವಿಶಂಕರ ಅವರು ರಾಜ್ಯಕ್ಕೆ ಮೂರನೇ ರ್ಯಾಂಕ್ ( 593 ಅಂಕ) ಪಡೆದು ಸಾಧನೆ ಮಾಡಿದ್ದಾರೆ.
ಶನಿವಾರ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟಿಸಿದಿದ್ದು ನಗರದ ವಿದ್ಯಾರ್ಥಿನಿಯ ಈ ಸಾಧನೆಗೆ ಕಾಲೇಜಿನ ಮಂಡಳಿ, ಶಿಕ್ಷಕ ವರ್ಗ ಮತ್ತು ಪೋಷಕರು ಸಿಹಿ ತಿನಿಸಿ ಸಂತಸ ವ್ಯಕ್ತಪಡಿಸಿದ್ದಾರೆ.
593 ಅಂಕಗಳನ್ನು ಪಡೆಯುವ ಮೂಲಕ ರಾಜ್ಯಕ್ಕೆ ಮೂರನೇ ರ್ಯಾಂಕ್ ಪಡೆದಿರುವ ವಿದ್ಯಾರ್ಥಿನಿಯ ಸಾಧನೆಗೆ ಕಾಲೇಜು ಹಾಗೂ ಕುಟುಂಬಸ್ಥರಲ್ಲಿ ಸಂತೋಷ ಮನೆ ಮಾಡಿದೆ.