ಹುಬ್ಬಳ್ಳಿಯಲ್ಲಿ ಭೀಕರ ಅಪಘಾತ ಪ್ರಕರಣ: ಮೃತರ ಕುಟುಂಬಕ್ಕೆ 2 ಲಕ್ಷ ರೂ.ಪರಿಹಾರ ಘೋಷಿಸಿದ ಪ್ರಧಾನಿ ಕಚೇರಿ!

ಹೊಸದಿಗಂತ ಜಿಜಿಟಲ್‌ ಡೆಸ್ಕ್‌:

ಹುಬ್ಬಳ್ಳಿಯಲ್ಲಿ ಇಂದು ನಸುಕಿನ ಜಾವ ನಡೆದ ಭೀಕರ ರಸ್ತೆ ಅಪಘಾತ ಪ್ರಕರಣದಲ್ಲಿ 8 ಮಂದಿ ಮೃತಪಟ್ಟಿದ್ದು, ಮೃತರ ಕುಟುಂಬಗಳಿಗೆ ಪ್ರಧಾನಿ ಕಚೇರಿ ಪರಿಹಾರ ಘೋಷಣೆ ಮಾಡಿದೆ. ಭೀಕರ ಅಪಘಾತದಲ್ಲಿ ಮೃತಪಟ್ಟವರಿಗೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ವ್ಯಕ್ತಪಡಿಸಿದ್ದಾರೆ.
ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಹಾಗೂ ಗಾಯಾಳುಗಳಿಗೆ 50 ಸಾವಿರ ರೂ. ಪರಿಹಾರವನ್ನು ನೀಡಲಾಗುವುದು ಎಂದು ತಿಳಿಸಿದ್ದಾರೆ.
ಕರ್ನಾಟಕದ ಹುಬ್ಬಳ್ಳಿಯಲ್ಲಿ ಸಂಭವಿಸಿರುವ ರಸ್ತೆ ಅಪಘಾತದಲ್ಲಿ ಹಲವರು ಸಾವಿಗೀಡಾಗಿರುವುದು ಅತ್ಯಂತ ನೋವಿನ ವಿಚಾರ. ಅವರ ಕುಟುಂಬದ ನೋವಿನಲ್ಲಿ ನಾನು ಭಾಗಿಯಾಗಲಿದ್ದೇನೆ. ಗಾಯಗೊಂಡವರು ಬೇಗ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇನೆ ಎಂದು ಪಿಎಂಒ ಕಚೇರಿ ತಿಳಿಸಿದೆ.

ಹುಬ್ಬಳ್ಳಿಯ ಗೋಕುಲ್ ರಸ್ತೆಯ ರಾಯನಾಳ ರಸ್ತೆಯಲ್ಲಿ ತಡರಾತ್ರಿ 12.45ರ ಸುಮಾರಿಗೆ ಭೀಕರ ಅಪಘಾತ ನಡೆದಿತ್ತು. ಕೊಲ್ಲಾಪುರದಿಂದ ಬೆಂಗಳೂರು ಕಡೆಗೆ ಹೋಗುತ್ತಿದ್ದ ಖಾಸಗಿ ಬಸ್ ಹಾಗೂ ಅಕ್ಕಿ ತುಂಬಿದ ಲಾರಿ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಲಾರಿ ಡ್ರೈವರ್, ಕ್ಲೀನರ್ ಹಾಗೂ ಬಸ್​ನಲ್ಲಿದ್ದ ಐವರು ಸೇರಿ ಆರು ಮಂದಿ ಮೃತಪಟ್ಟಿದ್ದಾರೆ. 6 ಮಂದಿ ಸ್ಥಳದಲ್ಲೇ ಮೃತಪಟ್ಟರೆ, ಓರ್ವ ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದು. ಇನ್ನು ಘಟನೆಯಲ್ಲಿ 25ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!