February 4, 2026
Wednesday, February 4, 2026
spot_img

ಬೆಂಗಳೂರಿನ ವಸತಿ ಪ್ರದೇಶವೊಂದರಲ್ಲಿ ಭಾರೀ ಪ್ರಮಾಣದ ಸ್ಪೋಟಕ ಪತ್ತೆ, ಭಯದಲ್ಲಿ ಜನ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ರಾಜಧಾನಿ ಬೆಂಗಳೂರಿನ ವಸತಿ ಪ್ರದೇಶವೊಂದರಲ್ಲಿ ಅನುಮಾನಾಸ್ಪದ ಸ್ಫೋಟಕ ವಸ್ತುಗಳು ಪತ್ತೆಯಾಗಿದ್ದು, ಜನರ ಆತಂಕಕ್ಕೆ ಕಾರಣವಾಗಿದೆ.

ಹುಳಿಮಾವು ಪೊಲೀಸ್ ಠಾಣೆ ವ್ಯಾಪ್ತಿಯ ಅಕ್ಷಯನಗರದಲ್ಲಿ ಸ್ಫೋಟಕ ಸಿಕ್ಕಿದೆ. ಕಲ್ಲು ಬಂಡೆಗಳನ್ನು ಒಡೆಯಲು ಅಕ್ರಮವಾಗಿ ಬಳಸುವ ಸ್ಫೋಟಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

ವಶಪಡಿಸಿಕೊಂಡ ವಸ್ತುಗಳಲ್ಲಿ ಕಲ್ಲು-ಕ್ರಷರ್ ಪೌಡರ್, ಲೈವ್ ಜೆಲೆಟಿನ್ ಸ್ಟಿಕ್‌ಗಳು, ಜೆಲ್ ಸ್ಫೋಟಕಗಳು, ಒಂದು ಟ್ರ್ಯಾಕ್ಟರ್ ಮತ್ತು ಒಂದು ನಿರ್ಮಾಣ ವಾಹನ ಸೇರಿವೆ ಎಂದು ಪೊಲೀಸರು ಹೇಳಿದ್ದಾರೆ.

ಪೊಲೀಸರ ಪ್ರಕಾರ, ವಸತಿ ಬಡಾವಣೆಯೊಳಗಿನ ಒಂದು ಸ್ಥಳದಲ್ಲಿ ಕಲ್ಲು ಬಂಡೆಗಳನ್ನು ಒಡೆಯಲು ಸ್ಫೋಟಕಗಳನ್ನು ಬಳಸಲಾಗುತ್ತಿದ್ದು, ಇದು ಸುತ್ತಮುತ್ತಲಿನ ಕಟ್ಟಡಗಳಿಗೆ ಹಾನಿಯಾಗುತ್ತಿದೆ ಎಂದು ದೂರು ನೀಡಲಾಗಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !