ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಿರುಗಾಳಿ ಮಳೆಗೆ ನಿನ್ನೆ ಫಾಟ್‌ಕೋಪರ್ನಲ್ಲಿ ಬೃಹತ್ ಗಾತ್ರದ ಬಿಲ್ ಬೋರ್ಡ್ ಬಿದ್ದಿದ್ದು, ಮೃತರ ಸಂಖ್ಯೆ 14ಕ್ಕೆ ಏರಿಕೆಯಾಗಿದೆ.
ಪೆಟ್ರೋಲ್ ಬಂಕ್ ಎದುರಗಡೆ ಬೃಹತ್ ಜಾಹೀರಾತು ಫಲಕವನ್ನು ನಿಲ್ಲಿಸಲಾಗಿತ್ತು. ಕಬ್ಬಿಣದ ಬಿಲ್ ಬೋರ್ಡ್ ಪೆಟ್ರೋಲ್ ಬಂಕ್ ಬಳಿ ನಿಂತಿದ್ದ ಕಾರುಗಳ ಮೇಲೆ ಬಿದ್ದ ಪರಿಣಾಮ ಸಾವು ನೋವಿನ ಸಂಖ್ಯೆ ಹೆಚ್ಚಾಗಿದೆ, ಘಟನೆಯಲ್ಲಿ 60 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಈ ಬಗ್ಗೆ ಪ್ರತಿಕ್ರಿಯಿಸಿದ್ದು, ಮೃತ ಕುಟುಂಬದ ಸದಸ್ಯಕ್ಕೆ 5 ಲಕ್ಷ ರೂ. ಪರಿಹಾರ ನೀಡಲಾಗುವುದು. ಮುಂಬೈನಲ್ಲಿರುವ ಎಲ್ಲಾ ಹೋರ್ಡಿಂಗ್‌ಗಳನ್ನು ಪರಿಶೀಲಿಸಲು ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದೇನೆ ಎಂದಿದ್ದಾರೆ.