ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಬೆಳ್ಳುಳ್ಳಿ ದರವು ಇಳಿಕೆ ಆಗಿರುವುದು ಗ್ರಾಹಕರಿಗೆ ನೆಮ್ಮದಿ ತಂದಿದೆ.
ಕಳೆದ ವರ್ಷ ಮಾರ್ಚ್ ಏಪ್ರಿಲ್ ತಿಂಗಳಲ್ಲಿ ಬೆಳ್ಳುಳ್ಳಿ ಚಿಲ್ಲರೆ ದರವು ಕೆಜಿಗೆ 500ರೂ ದಾಟಿತ್ತು. ಈಗ ಸಧ್ಯ ಯಶವಂತಪುರ ಕೃಷಿ ಮಾರುಕಟ್ಟೆಯಲ್ಲಿ ಬೆಳ್ಳುಳ್ಳಿ ಸಗಟು ದರ 50 ರಿಂದ 100 ರೂಪಾಯಿ ಇದ್ದರೆ, ಚಿಲ್ಲರೆ ದರ 120 ರಿಂದ 140 ರೂ ಇದೆ.
ಕಳೆದ ಬಾರಿಗೆ ಹೋಲಿಸಿದರೆ ಈ ವರ್ಷ ರಾಜಸ್ಥಾನ ಹಾಗೂ ಮಧ್ಯಪ್ರದೇಶದಲ್ಲಿ ಬೆಳ್ಳುಳ್ಳಿ ಉತ್ಪಾದನೆ ಹೆಚ್ಚಾಗಿದ್ದು, ಇದರಿಂದ ಕರ್ನಾಟಕದ ಮಾರುಕಟ್ಟೆಗೆ ಆವಕ ಹೆಚ್ಚಾಗಿದೆ. ಹೀಗಾಗಿ ಬೆಳ್ಳುಳ್ಳಿ ದರ ಇಳಿಕೆಯಾಗಿದೆ ಎನ್ನುತ್ತಾರೆ ವ್ಯಾಪಾರಿಗಳು.