ಹೊಸದಿಗಂತ ಡಿಜಿಟಲ್ ಡೆಸ್ಕ್:
ಈ ಹಿಂದೆ ಮಾರುಕಟ್ಟೆಯಲ್ಲಿ ಬೆಳ್ಳುಳ್ಳಿ ಬೆಲೆ ವಿಪರೀತವಾಗಿತ್ತು. ಕೆಜಿಗೆ 300ರಿಂದ 400 ರೂ.ಗೆ ಮಾರಾಟ ಮಾಡಿ ಗ್ರಾಹಕರ ಜೇಬಿಗೆ ಕತ್ತರಿ ಹಾಕಲಾಗಿತ್ತು. ಇದೀಗ ಬೆಳ್ಳುಳ್ಳಿ ಬೆಲೆ ದಿಢೀರ್ ಕುಸಿದ ಹಿನ್ನೆಲೆಯಲ್ಲಿ ರೈತರು ಎಪಿಎಂಸಿ ಹಾಗೂ ವರ್ತಕರ ವಿರುದ್ಧ ಮಾರುಕಟ್ಟೆ ಬಂದ್ ಮಾಡಿ ಪ್ರತಿಭಟನೆ ನಡೆಸುತ್ತಿದ್ದಾರೆ.
ಹಾವೇರಿ ಜಿಲ್ಲೆ ರಾಣೇಬೆನ್ನೂರು ತಾಲೂಕಿನ ಹಲಗೇರಿ ಗ್ರಾಮದಲ್ಲಿ ಬೆಳ್ಳುಳ್ಳಿ ಕ್ವಿಂಟಲ್‌ಗೆ ₹20 ಸಾವಿರಕ್ಕೆ ಮಾರಾಟವಾಗುತ್ತಿತ್ತು. ಈಗ ವ್ಯಾಪಾರಸ್ಥರು ಕೇವಲ 6,000 ರೂ. ಪಡೆಯುತ್ತಿದ್ದಾರೆ. ರೈತರ ಹೊಟ್ಟೆ ಮೇಲೆ ಹೊಡಿಯುತ್ತಿದ್ದೀರಿ, ರೈತರಿಗೆ ತೊಂದರೆಯಾಗುತ್ತಿದೆ ಎಂದು ಎಪಿಎಂಸಿ ಅಧಿಕಾರಿಗಳು ಹಾಗೂ ವರ್ತಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಮಾರುಕಟ್ಟೆ ಬಂದ್ ಮಾಡಿ ನೂರಾರು ರೈತರು ಬೀದಿಗಿಳಿದು ಆಕ್ರೋಶ ವ್ಯಕ್ತಪಡಿಸಿದ್ದಾರೆ.