ಹೊಸದಿಗಂತ ಡಿಜಿಟಲ್ ಡೆಸ್ಕ್:
ಆಂಧ್ರಪ್ರದೇಶದ ಎನ್‌ಟಿಆರ್ ಜಿಲ್ಲೆಯ ವಿಜಯವಾಡದಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದೆ. ತಡರಾತ್ರಿ ಸ್ಟೆಲ್ಲಾ ಕಾಲೇಜು ಬಳಿ ಇರುವ ಟಿವಿಎಸ್ ಶೋರೂಂನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಶೋರೂಂನಲ್ಲಿದ್ದ ಹೊಸ ಬೈಕ್‌ಗಳು ಬೆಂಕಿಗೆ ಆಹುತಿಯಾಗಿವೆ.
ಭಾರಿ ಬೆಂಕಿಯಿಂದ ದಟ್ಟ ಹೊಗೆ ಆವರಿಸಿದ್ದು, ಮಾಹಿತಿ ಪಡೆದ ಅಗ್ನಿಶಾಮಕ ಸಿಬ್ಬಂದಿ ತಕ್ಷಣ ಸ್ಥಳಕ್ಕಾಗಮಿಸಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದರು. ಬೆಂಕಿ ಅವಘಡಕ್ಕೆ ಕಾರಣ ತಿಳಿದುಬಂದಿಲ್ಲ. ಘಟನೆ ಸಂಬಂಧ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ. ಆಸ್ತಿ-ಪಾಸ್ತಿ ನಷ್ಟದ ಬಗ್ಗೆಯೂ ತನಿಖೆ ನಂತರವಷ್ಟೇ ತಿಳಿದುಬರಬೇಕಿದೆ.