ಹೊಸದಿಗಂತ ಡಿಜಿಟಲ್ ಡೆಸ್ಕ್:
ಐದು ಅಂತಸ್ತಿನ ಸಿನಿಮಾ ಥಿಯೇಟರ್ಗೆ ಬೆಂಕಿ ಬಿದ್ದಿರುವ ಘಟನೆ ಹೈದರಾಬಾದ್ನಲ್ಲಿ ನಡೆದಿದೆ. ಚಂದಾನಗರದಲ್ಲಿರುವ ಗಂಗಾರಾಮ್ ಜೆಪಿ ಚಿತ್ರಮಂದಿರದಲ್ಲಿ ಅಗ್ನಿ ಅವಘಡ ಸಂಭವಿಸಿದೆ.
ಥಿಯೇಟರ್ನಲ್ಲಿದ್ದ ಐದು ಸ್ಕ್ರೀನ್ಗಳಿಗೆ ಬೆಂಕಿ ಹೊತ್ತಿಕೊಂಡಿದೆ. ಪರಿಣಾಮವಾಗಿ, ಬೆಂಕಿಯಲ್ಲಿ ಪರದೆಗಳು ಮತ್ತು ಪೀಠೋಪಕರಣಗಳು ಸುಟ್ಟು ಬೂದಿಯಾಗಿವೆ. ಮಾಹಿತಿ ತಿಳಿದ ತಕ್ಷಣ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದ್ದಾರೆ.
ಅಗ್ನಿಶಾಮಕ ಸಿಬ್ಬಂದಿ ಮೂರು ಅಗ್ನಿಶಾಮಕ ವಾಹನಗಳ ಮೂಲಕ ಬೆಂಕಿಯನ್ನು ನಿಯಂತ್ರಿಸುತ್ತಿದ್ದಾರೆ. ಆದರೆ, ಈಗಾಗಲೇ ಲಕ್ಷಗಟ್ಟಲೆ ಬೆಲೆ ಬಾಳುವ ಆಸ್ತಿ ಹಾನಿಯಾಗಿದೆಯಂತೆ. ಬೆಂಕಿ ಅನಾಹುತಕ್ಕೆ ಕಾರಣಗಳು ಇನ್ನೂ ತಿಳಿದು ಬಂದಿಲ್ಲ. ತನಿಖೆ ನಡೆಯುತ್ತಿದೆ.