ಸುಟ್ಟು ಕರಕಲಾದ ಹೋಲ್‌ ಸೇಲ್‌ ಶಾಪ್:‌ 2ಕೋಟಿ ರೂ ಮೌಲ್ಯದ ಆಸ್ತಿ ಹಾನಿ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಬುಧವಾರ ತಡರಾತ್ರಿ ಸಗಟು ವಸ್ತುಗಳ ಅಂಗಡಿ ಬೆಂಕಿಗಾಹುತಿಯಾದ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ. ಕಡಪ ಜಿಲ್ಲೆಯ ವೈವಿ ಸ್ಟ್ರೀಟ್‌ನಲ್ಲಿರುವ ಹೋಲ್‌ ಸೇಲ್‌ ಶಾಪ್‌ನಲ್ಲಿ ಬೆಂಕಿ ಕಾಣಿಸಿಕೊಂಡು ಕೆಲವೇ ಕ್ಷಣಗಳಲ್ಲಿ ಬೆಂಕಿ ವ್ಯಾಪಿಸಿ ಇಡೀ ಅಂಗಡಿ ಸುಟ್ಟು ಕರಕಲಾಗಿದೆ.

ದಟ್ಟ ಹೊಗೆ ಇಡೀ ಪ್ರದೇಶವನ್ನು ಆವರಿಸಿತ್ತು. ಮಾಹಿತಿ ತಿಳಿದ ತಕ್ಷಣ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿದರು. ಮೂರು ಅಗ್ನಿಶಾಮಕ ವಾಹನಗಳು ಬೆಂಕಿ ನಂದಿಸಲು ಪ್ರಯತ್ನಿಸುತ್ತಿವೆ. ಬೆಂಕಿ ಇನ್ನೂ ಉರಿಯುತ್ತಿದ್ದು, ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಕಾರ್ಯಪ್ರವೃತ್ತರಾಗಿದ್ದಾರೆ.

ಈ ಅವಘಡದಲ್ಲಿ ಶಾಪ್‌ ಸಂಪೂರ್ಣ ಸುಟ್ಟು ಕರಕಲಾಗಿದ್ದು, 2 ಕೋಟಿ ರೂಪಾಯಿ ಮೌಲ್ಯದ ಆಸ್ತಿ ಹಾನಿಯಾಗಿದೆ ಎಂದು ಅಂದಾಜಿಸಲಾಗಿದೆ. ಘಟನೆಗೆ ಯಾರೋ ದುಷ್ಕರ್ಮಿಗಳು ಬೆಂಕಿ ಹಚ್ಚಿರುವುದು ಕಾರಣ ಎಂದು ತಿಳಿದುಬಂದಿದೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!