ಹೊಸದಿಗಂತ ವರದಿ ಬಳ್ಳಾರಿ:
ಸ್ವಾತಂತ್ರ್ಯೋತ್ಸವ ದಿನಾಚರಣೆಯ ಪ್ರಯುಕ್ತ ಇಂದು ನಗರದ ಹೆಚ್.ಆರ್.ಗವಿಯಪ್ಪ ವೃತ್ತದಲ್ಲಿರುವ 150 ಅಡಿ ಎತ್ತರ ಸ್ಥಂಭದ ಬೃಹತ್ ಧ್ವಜಾರೋಹಣವನ್ನು ಯುವಜನ ಸಬಲೀಕರಣ, ಕ್ರೀಡಾ, ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ನಾಗೇಂದ್ರ ಅವರು ನೆರವೇರಿಸಿದರು.
ಇದಕ್ಕೂ ಮುನ್ನ ಅವರು ನಗರದ ಡಾ.ರಾಜ್ ಕುಮಾರ್ ಉದ್ಯಾನವನದಲ್ಲಿನ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಸಮರ್ಪಣೆ ಮಾಡಿದರು.
ಈ ಸಂದರ್ಭದಲ್ಲಿ ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ, ಮಹಾನಗರ ಪಾಲಿಕೆ ಮೇಯರ್ ಡಿ.ತ್ರಿವೇಣಿ, ಉಪಮೇಯರ್ ಜಾನಕಿ, ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ, ಪೊಲೀಸ್ ಮಹಾನಿರೀಕ್ಷರಾದ ಲೋಕೇಶ್ ಕುಮಾರ್, ಜಿಪಂ ಸಿಇಒ ರಾಹುಲ್ ಶರಣಪ್ಪ ಸಂಕನೂರು, ಎಸ್ಪಿ ರಂಜಿತ್‍ಕುಮಾರ್ ಬಂಡಾರು, ಸಹಾಯಕ ಆಯುಕ್ತ ಹೇಮಂತ್ ಕುಮಾರ್, ಎಡಿಸಿ ಮೊಹಮ್ಮದ್ ಜುಬೇರ್, ಮಹಾನಗರ ಪಾಲಿಕೆ ಆಯುಕ್ತ ಎಸ್.ಎನ್.ರುದ್ರೇಶ್, ಎಎಸ್ಪಿ ನಟರಾಜ ಸೇರಿದಂತೆ ವಿವಿಧ ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ಹಾಗೂ ಸಾರ್ವಜನಿಕರು ಇದ್ದರು.