ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರ್ನಾಟಕದ ಪ್ರಮುಖ ಧಾರ್ಮಿಕ ಮತ್ತು ಪ್ರವಾಸಿ ತಾಣವಾಗಿರುವ ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮ ದೇಗುಲ ಅಭಿವೃದ್ಧಿಗೆ ಕೇಂದ್ರ ಸರ್ಕಾರ 100ಕೋಟಿ ರೂ ಮಂಜೂರು ಮಾಡಿದೆ.
ಸವದತ್ತಿ ಯಲ್ಲಮ್ಮ ದೇಗುಲ ಅಭಿವೃದ್ಧಿಗೆ ಸಂಬಂಧಿಸಿದಂತೆ ಸಚಿವ ಎಚ್.ಕೆ.ಪಾಟೀಲ ಅವರು ಕೇಂದ್ರ ಪ್ರವಾಸೋಧ್ಯಮ ಕಾರ್ಯದರ್ಶಿ ಅವರಿಗೆ ಪತ್ರ ಬರೆಯುವ ಮೂಲಕ ರಾಜ್ಯದ ಪ್ರಮುಖ ಧಾರ್ಮಿಕ ಕೇಂದ್ರವಾಗಿರುವ ಸವದತ್ತಿ ಅಭಿವೃದ್ಧಿ ಅಗತ್ಯದ ಬಗ್ಗೆ ಮನವರಿಕೆ ಮಾಡಿಕೊಟ್ಟಿದ್ದರು.
ಸವದತ್ತಿ ಯಲ್ಲಮ್ಮ ದೇಗುಲಕ್ಕೆ ಒಂದು ಕೋಟಿಗೂ ಅಧಿಕ ಪ್ರವಾಸಿಗರೂ ಮತ್ತು ಭಕ್ತರು ಭೇಟಿ ನೀಡಿದ್ದು, ಈ ಹಿನ್ನೆಲೆಯಲ್ಲಿ ಅಗತ್ಯ ವಸತಿ ವ್ಯವಸ್ಥೆ ಸೇರಿದಂತೆ ಮೂಲಭೂತ ಸೌಲಭ್ಯ ಕಲ್ಪಿಸಬೇಕಿದ್ದು ಈಗಿರುವ ಸೌಕರ್ಯ ಉನ್ನತೀಕರಣ ಮತ್ತು ಹೊಸ ಮೂಲ ಸೌಕರ್ಯಗಳ ಅಭಿವೃದ್ಧಿಗೆ ನೂರು ಕೋಟಿ ರೂ.ಗಳ ಅಗತ್ಯವಿದೆ ಎಂಬುದನ್ನು ಕೇಂದ್ರ ಸರ್ಕಾರದ ಗಮನಕ್ಕೆ ತಂದಿದ್ದರು.