ಗುಜರಾತ್‌ನಲ್ಲಿ ಬಿಜೆಪಿಗೆ ಭಾರೀ ಮುನ್ನಡೆ, ಹಿಮಾಚಲ ಪ್ರದೇಶದಲ್ಲಿ ತೀವ್ರ ಪೈಪೋಟಿ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ದೇಶದ ಗಮನ ಸೆಳೆದಿರುವ ಗುಜರಾತ್ ಮತ್ತು ಹಿಮಾಚಲಪ್ರದೇಶ ವಿಧಾನಸಭೆಗಳ ಚುನಾವಣಾ ಫಲಿತಾಂಶ ಹೊರಬೀಳಲಿದೆ. ಈಗಾಗಲೇ ಮತದಾನ ಆರಂಭವಾಗಿದ್ದು, ಗುಜರಾತ್‌ನಲ್ಲಿ ಬಿಜೆಪಿ ಭಾರೀ ಮುನ್ನಡೆ ಸಾಧಿಸುತ್ತಿದೆ. ಆದರೆ ಹಿಮಾಚಲ ಪ್ರದೇಶದಲ್ಲಿ ಬಿಜೆಪಿ-ಕಾಂಗ್ರೆಸ್ ಮಧ್ಯೆ ಗೆಲುವಿಗೆ ಭಾರೀ ಪೈಪೋಟಿ ನಡೆಯುತ್ತಿದೆ.

1995 ರಿಂದ ಗುಜರಾತ್‌ನಲ್ಲಿ ಬಿಜೆಪಿ ಅಧಿಕಾರದಲ್ಲಿದ್ದು, ಇದೀಗ ಸತತ ಏಳನೇ ಅವಧಿಗೆ ಅಧಿಕಾರದ ಗುರಿ ಹೊಂದುವ ಹುಮ್ಮಸ್ಸಿನಲ್ಲಿದೆ ಬಿಜೆಪಿ. ಚುನಾವಣಾ ಪೂರ್ವ ಸಮೀಕ್ಷೆಗಳಲ್ಲಿಯೂ ಬಿಜೆಪಿಗೆ ಗೆಲುವು ಎನ್ನಲಾಗಿತ್ತು. ಸದ್ಯಕ್ಕೆ ಬಿಜೆಪಿ ಗುಜರಾತ್‌ನಲ್ಲಿ 139 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಇನ್ನು ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ 34 ಹಾಗೂ ಬಿಜೆಪಿ 33 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!