ಮೈಸೂರಿನಲ್ಲಿ ಯದುವೀರ್‌ಗೆ ಭಾರೀ ಮುನ್ನಡೆ, ಗೆಲುವಿಗೂ ಮುನ್ನವೇ ʼಸಂಸದರುʼ ಬೋರ್ಡ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಅಧಿಕೃತ ಫಲಿತಾಂಶ ಘೋಷಣೆಗೂ ಮುನ್ನವೇ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿ ನಾಮಫಲಕ ವೈರಲ್ ಆಗುತ್ತಿದೆ. ಈಗಾಗಲೇ ಕೌಂಟಿಂಗ್‌ ಪ್ರಕ್ರಿಯೆ ನಡೆಯುತ್ತಿದ್ದು, ಯದುವೀರ್‌ ಮುನ್ನಡೆ ಕಾಯ್ದುಕೊಂಡಿದ್ದಾರೆ.

ಶ್ರೀ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಮೈಸೂರು- ಕೊಡಗು ಸಂಸದರು  ಎಂಬ ನಾಮಫಲಕ  ಲೋಕಸಭಾ ಚುನಾವಣೆಯ ಫಲಿತಾಂಶ ಹೊರಬರುವ ಮುನ್ನವೇ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಯದುವೀರ್ ಯುವ ಬ್ರಿಗೇಡ್ ವತಿಯಿಂದ ಈ ನಾಮಫಲಕವನ್ನು ಉಡುಗೊರೆ ನೀಡಲಾಗಿದ್ದು, ನಾಡ ಅಧಿದೇವತೆ ಚಾಮುಂಡೇಶ್ವರಿ ತಾಯಿಗೆ ಪೂಜೆ ಸಲ್ಲಿಸಿದ ಫೋಟೊ ಇದಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!