ಹೊಸದಿಗಂತ ಡಿಜಿಟಲ್ ಡೆಸ್ಕ್:
ಹುಬ್ಬಳ್ಳಿಯ ವಿದ್ಯಾನಗರ ಪೊಲೀಸ ಠಾಣಾ ವ್ಯಾಪ್ತಿಯ ಪಾರಿಜಾತ ರೆಸಿಡೆನ್ಸಿಯಲ್ಲಿ ನಡೆಯುತ್ತಿದ್ದ ಬೃಹತ್ ವೇಶ್ಯಾವಾಟಿಕೆ ಜಾಲವನ್ನು ಸಿಸಿಬಿ ಪೊಲೀಸರು, ಮೈಸೂರಿನ ಒಡನಾಡಿ ಸಂಸ್ಥೆಯ ಸಹಯೋಗದೊಂದಿಗೆ ಭೇದಿಸಿದ್ದಾರೆ.
ಈ ದಾಳಿಯಲ್ಲಿ 10ಕ್ಕೂ ಹೆಚ್ಚು ಮಹಿಳೆಯರನ್ನು ರಕ್ಷಿಸಲಾಗಿದ್ದು, 7 ಪುರುಷರನ್ನು ಬಂಧಿಸಲಾಗಿದೆ. ಲಾಡ್ಜ್ ಮಾಲೀಕ ಪರಾರಿಯಾಗಿದ್ದು, ಮ್ಯಾನೇಜರ್ ಮತ್ತು ಸಿಬ್ಬಂದಿಯನ್ನ ಬಂಧಿಸಿದ್ದಾರೆ. ಈ ಕಾನೂನುಬಾಹಿರ ದಂಧೆಯು ಕಾಲೇಜುಗಳ ಸಮೀಪದಲ್ಲೇ ರಹಸ್ಯವಾಗಿ ನಡೆಯುತ್ತಿತ್ತು ಎಂಬುದು ತಿಳಿದು ಸ್ಥಳೀಯರೇ ಶಾಕ್ ಆಗಿದ್ದಾರೆ.
ದಾಳಿಯ ಸಂದರ್ಭದಲ್ಲಿ, ಮಹಿಳೆಯರನ್ನು ಲಾಡ್ಜ್‌ನ ಬಾತ್‌ರೂಮ್‌ನಿಂದ ರಹಸ್ಯ ಕೋಣೆಗೆ ಕೊಂಡೊಯ್ಯಲಾಗಿತ್ತು. ಆದರೆ, ಸಿಸಿಬಿ ಪೊಲೀಸರು ರಹಸ್ಯ ಕೋಣೆಯ ಪ್ರವೇಶ ದ್ವಾರವನ್ನು ತೆರೆದು ಮಹಿಳೆಯರನ್ನು ಸುರಕ್ಷಿತವಾಗಿ ರಕ್ಷಿಸಿದ್ದಾರೆ. ಈ ಜಾಲವು ಸಂಘಟಿತ ರೀತಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಇದರ ಹಿಂದೆ ದೊಡ್ಡ ಮಾಫಿಯಾ ಇರಬಹುದೆಂದು ಪೊಲೀಸರು ಶಂಕಿಸಿದ್ದಾರೆ.