June 9, 2026
Tuesday, June 9, 2026
spot_img

SHOCKING | ಬೆಂಗಳೂರಿನ ಆವಲಹಳ್ಳಿ ಬಳಿ ಭಾರೀ ಪ್ರಮಾಣದ ಸ್ಫೋಟಕ ಪತ್ತೆ: 225 ಜಿಲೆಟಿನ್ ಕಡ್ಡಿ ವಶಕ್ಕೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಮತ್ತೊಮ್ಮೆ ಸ್ಫೋಟಕಗಳು ಪತ್ತೆಯಾಗಿದೆ. ಆವಲಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಭಾರೀ ಪ್ರಮಾಣದ ಸ್ಫೋಟಕಗಳು ಪತ್ತೆಯಾಗಿದ್ದು, ಪೊಲೀಸರು ಜಿಲೆಟಿನ್‌ ಕಡ್ಡಿಗಳು ಹಾಗೂ ಡಿಟೋನೇಟರ್‌ಗಳನ್ನು ವಶಕ್ಕೆ ಪಡೆದಿದ್ದಾರೆ.

ಆವಲಹಳ್ಳಿಯ ಕಾಡ ಅಗ್ರಹಾರದಲ್ಲಿ ಸ್ಫೋಟಗಳು ಇವೆ ಎನ್ನುವ ಖಚಿತ ಮಾಹಿತಿಯನ್ನು ಆಧರಿಸಿ ಪೊಲೀಸರು ವೆಂಕಟರಾಮ ರೆಡ್ಡಿ ಎನ್ನುವವರ ಜಾಗದ ಮೇಲೆ ದಾಳಿ ಮಾಡಿದ್ದಾರೆ. ಈ ವೇಳೆ ಪೊಲೀಸರಿಗೆ 50 ಡಿಟೋನೇಟರ್ ಕಡ್ಡಿಗಳು ಹಾಗೂ 225 ಜಿಲೆಟಿನ್ ಕಡ್ಡಿಗಳು ಸಿಕ್ಕಿವೆ.

ಪ್ರಾಥಮಿಕ ತನಿಖೆಯ ಅನ್ವಯ ಜಮೀನಿನಲ್ಲಿ ಬಂಡೆಗಳನ್ನು ಒಡೆಯಲು ಜಿಲೆಟಿನ್‌ ಕಡ್ಡಿಗಳನ್ನು ತರಲಾಗಿತ್ತು ಎಂದು ಹೇಳಲಾಗಿದೆ. ಆದರೆ ಇಷ್ಟೊಂದು ಪ್ರಮಾಣದ ಸ್ಫೋಟಗಳಿಗೆ ಪರವಾನಗಿ ಇಲ್ಲ. ಇದರ ಹಿಂದಿನ ಸತ್ಯ ಏನು ಎಂದು ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !