ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಾರ್ಚ್ 22 ರಂದು ಕರ್ನಾಟಕ ಬಂದ್‌ಗೆ ಬೆಂಬಲ ನೀಡುವಂತೆ ಹಿರಿಯ ಹೋರಾಟಗಾರ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಇಂದು ಬೃಹತ್ ರ‍್ಯಾಲಿ ನಡೆಯಲಿದೆ. ಬೆಳಿಗ್ಗೆ 11 ಗಂಟೆಗೆ ಮೈಸೂರು ಬ್ಯಾಂಕ್ ವೃತ್ತದಿಂದ ಆರಂಭವಾಗಲಿದೆ.
ಕೆ.ಜಿ ರಸ್ತೆ, ಮೆಜೆಸ್ಟಿಕ್, ಕೆಂಪೇಗೌಡ ಮೆಟ್ರೋ ನಿಲ್ದಾಣ, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣ, ಗಾಂಧಿನಗರ, ಮಲ್ಲೇಶ್ವರಂ, ಯಶವಂತಪುರ ಸೇರಿದಂತೆ ನಗರದ ಪ್ರಮುಖ ರಸ್ತೆಗಳಲ್ಲಿ ಈ ರ‍್ಯಾಲಿ ಸಂಚರಿಸಲಿದೆ.
ತೆರೆದ ವಾಹನದಲ್ಲಿ ಮೈಕ್ ಮೂಲಕ ಮಾತನಾಡಲಿರುವ ವಾಟಾಳ್ ನಾಗರಾಜ್, ಹೋಟೆಲ್, ಲಾಡ್ಜ್, ರೆಸ್ಟೋರೆಂಟ್, ಥಿಯೇಟರ್, ಮಾಲ್, ಪಿವಿಆರ್ ಸೇರಿದಂತೆ ಎಲ್ಲಾ ಅಂಗಡಿ ಮುಂಗಟ್ಟುಗಳನ್ನು ಸ್ವಯಂಪ್ರೇರಿತವಾಗಿ ಬಂದ್ ಮಾಡುವಂತೆ ಮನವಿ ಮಾಡಲಿದ್ದಾರೆ.
ಈ ರ‍್ಯಾಲಿಯಲ್ಲಿ ಡಾ. ರಾಜ್‌ಕುಮಾರ್ ಅಭಿಮಾನಿಗಳ ಸಂಘ, ಕನ್ನಡ ಸೇನೆ, ಕರ್ನಾಟಕ ರಕ್ಷಣಾ ವೇದಿಕೆ, ಕನ್ನಡ ಜಾಗೃತಿ ವೇದಿಕೆ ಸೇರಿದಂತೆ ಹಲವು ಕನ್ನಡಪರ ಸಂಘಟನೆಗಳು ಭಾಗವಹಿಸಲಿವೆ.