ಅಂಕೋಲಾದಲ್ಲಿ ಕಾಣಿಸಿದ ಬೃಹತ್ ಗಾತ್ರದ ಕಾಳಿಂಗ ಸರ್ಪ

ಹೊಸದಿಗಂತ ವರದಿ ಅಂಕೋಲಾ:

ತಾಲೂಕಿನ ಕೆಂದಗೆ ಗ್ರಾಮದ ಮನೆಯೊಂದರ ಬಳಿ ಕಾಣಿಸಿಕೊಂಡ ಬೃಹತ್ ಕಾಳಿಂಗ ಸರ್ಪವನ್ನು ಉರಗರಕ್ಷಕ ಮಹೇಶ ನಾಯ್ಕ ಅವರು ಅರಣ್ಯ ಇಲಾಖೆ ಸಿಬ್ಬಂದಿಗಳ ಸಹಾಯದಿಂದ ಹಿಡಿದು ಸುರಕ್ಷಿತ ಸ್ಥಳದಲ್ಲಿ ಬಿಟ್ಟಿದ್ದಾರೆ.

ಕೆಂದಗೆ ಗ್ರಾಮದ ದೇವರಾಯ ಗೌಡ ಎನ್ನುವವರ ಮನೆ ಸಮೀಪದ ಗದ್ದೆಯಲ್ಲಿ ಸುಮಾರು 12 ಅಡಿ ಉದ್ದದ ಕಾಳಿಂಗ ಸರ್ಪ ಕಾಣಿಸಿಕೊಂಡಿದ್ದು ಈ ಕುರಿತು ಅರಣ್ಯ ಇಲಾಖೆ ಸಿಬ್ಬಂದಿಗಳು ಮಹೇಶ ನಾಯ್ಕ ಅವರಿಗೆ ಮಾಹಿತಿ ನೀಡಿದ್ಧರು ತಕ್ಷಣ ಅವರ್ಸಾದಿಂದ ದೂರದ ಕೆಂದಗೆ ಗ್ರಾಮಕ್ಕೆ ಆಗಮಿಸಿದ ಮಹೇಶ ನಾಯ್ಕ ಅರಣ್ಯ ಇಲಾಖೆಯ ಸಿಬ್ಬಂದಿಗಳ ಸಹಾಯದಿಂದ ಕಾಳಿಂಗ ಸರ್ಪ ಹಿಡಿದು ಸುರಕ್ಷಿತ ಅರಣ್ಯ ಪ್ರದೇಶದಲ್ಲಿ ಬಿಟ್ಟಿದ್ದಾರೆ.

ಅಂಕೋಲಾ ವಲಯ ಅರಣ್ಯಾಧಿಕಾರಿ ಜಿ.ವಿ.ನಾಯಕ ಅವರ ಮಾರ್ಗದರ್ಶನದಲ್ಲಿ ಉಪ ವಲಯ ಅರಣ್ಯಾಧಿಕಾರಿ ಶಂಭು, ಅರಣ್ಯ ರಕ್ಷಕ ಯಮನಪ್ಪ, ಪ್ರಮೋದ ಗೌಡ, ಬೀರಾ ಗೌಡ, ಅಶೋಕ ಗೌಡ, ಪ್ರಕಾಶ ಗೌಡ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!