Sunday, December 4, 2022

Latest Posts

ಕಂಬ್ಳಿಹುಳ ಸಿನಿಮಾಕ್ಕೆ ಭರ್ಜರಿ ರೆಸ್ಪಾನ್ಸ್, ಹೊಸಬರ ಸಿನಿಮಾ ಒಪ್ಪಿದ ಪ್ರೇಕ್ಷಕರು

ಹೊಸದಿಗಂತ ಡಿಜಿಟಲ್ ಡೆಸ್ಕ್:

ನವಿರಾದ ಪ್ರೇಮಕತೆಯುಳ್ಳ ಸಿನಿಮಾ ಕಂಬ್ಳಿಹುಳ ರಾಜ್ಯಾದ್ಯಂತ ಭರ್ಜರಿ ಯಶಸ್ಸು ಕಾಣುತ್ತಿದೆ. ಸಿನಿಮಾ ರಿಲೀಸ್‌ಗೂ ಮುನ್ನವೇ ಸಾಕಷ್ಟು ಸದ್ದು ಮಾಡಿದ್ದು, ಸಿನಿಮಾದ ಹಾಡುಗಳು ಎಲ್ಲರ ಬಾಯಲ್ಲಿ ಗುನುಗುತ್ತಿವೆ. ಹೊಸಬರ ಈ ಸಿನಿಮಾಕ್ಕೆ ನವನ್ ಶ್ರೀನಿವಾಸ್ ಆಕ್ಷನ್ ಕಟ್ ಹೇಳಿದ್ದಾರೆ. ಕಿರು ಚಿತ್ರಗಳನ್ನು ನಿರ್ದೇಶಿಸುತ್ತಿದ್ದ ನವನ್ ದೊಡ್ಡ ಸಿನಿಮಾಗೆ ಕೈ ಹಾಕಿದ್ದು, ಮೊದಲ ಚಿತ್ರದಲ್ಲೇ ಗೆದ್ದಿದ್ದಾರೆ.

ಕಂಬ್ಳಿಹುಳ ಸಿನಿಮಾಗೆ ಸ್ಯಾಂಡಲ್‌ವುಡ್ ಸಾಥ್ ನೀಡಿದ್ದು, ನಟ ಶ್ರೀಮುರುಳಿ, ನಿರ್ದೇಶಕ ಸಿಂಪಲ್ ಸುನಿ, ಪೃಥ್ವಿ ಅಂಬರ್ ಸೇರಿದಂತೆ ಅನೇಕರು ಸಾಥ್ ನೀಡಿ, ಹೊಸಬರ ಸಿನಿಮಾಗೆ ಪ್ರೋತ್ಸಾಹ ನೀಡಿ ಎಂದಿದ್ದಾರೆ.

ಕೊಪ್ಪ, ಶೃಂಗೇರಿ, ತೀರ್ಥಹಳ್ಳಿ ಸುತ್ತಮುತ್ತ ಶೂಟಿಂಗ್ ನಡೆದಿದ್ದು, ಛಾಯಾಗ್ರಹಣಕ್ಕೆ ಅಭಿಮಾನಿಗಳು ಫಿದಾ ಆಗಿದ್ದಾರೆ. ರಂಗಭೂಮಿ ಕಲಾವಿದರಾದ ಅಂಜನ್ ನಾಗೇಂದ್ರ ಹಾಗೂ ಅಶ್ವಿತಾ ಆರ್.ಹೆಗಡೆ ಮುಖ್ಯ ಪಾತ್ರದಲ್ಲಿ ನಟಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!