ಮಹಾರಾಷ್ಟ್ರದಲ್ಲಿ ಭೀಕರ ರಸ್ತೆ ಅಪಘಾತ: ಹುಬ್ಬಳ್ಳಿ ಮೂಲದ ಮೂವರ ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಮಹಾರಾಷ್ಟ್ರದ ಸೊಲ್ಲಾಪುರದ ಕೃಷಿ ಉತ್ಪನ್ನ ಮಾರುಕಟ್ಟೆ ಮುಂಭಾಗ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಹುಬ್ಬಳ್ಳಿ ಮೂಲದ ಓರ್ವ ಮಹಿಳೆ ಸೇರಿದಂತೆ ಮೂವರು ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟು, ನಾಲ್ವರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.

ಪುಣೆಯಿಂದ ಹುಬ್ಬಳ್ಳಿಗೆ ಹೋಗುತ್ತಿದ್ದ ಕಾರು ಸೊಲ್ಲಾಪುರದ ಕೃಷಿ ಉತ್ಪನ್ನ ಮಾರುಕಟ್ಟೆ ಮುಂಭಾಗ ವೇಗವಾಗಿ ಬಂದು ನಿಂತಿದ್ದ ಟ್ರಕ್​ಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಅರ್ಧ ಕಾರು ಟ್ರಕ್​ ಒಳಗೆ ನುಗ್ಗಿದೆ.ಭೀಕರ ಅಪಘಾತದಲ್ಲಿ ಹುಬ್ಬಳ್ಳಿಯ ಮೂಲದವರಾದ ಓರ್ವ ಮಹಿಳೆ ಸೇರಿದಂತೆ ಮೂವರು ಮೃತಪಟ್ಟಿದ್ದಾರೆ. ಇವರುಗಳ ಹೆಸರುಗಳು ತಿಳಿದು ಬಂದಿಲ್ಲ.
ಘಟನೆಯಲ್ಲಿ ಸಚಿನ್​ ಸೀತಾಳೆ(28), ವಿನಾಯಕ ಬಸವರಾಜ ದೇವಕರ್​(16) ತೀವ್ರ ಗಾಯಗೊಂಡಿದ್ದಾರೆ. ಇನ್ನು ಕಾರು ಅಪಘಾತಕ್ಕೆ ಚಾಲಕನ ನಿರ್ಲಕ್ಷ್ಯ ಮತ್ತು ವೇಗವೇ ಕಾರಣ ಎಂದು ಹೇಳಲಾಗಿದೆ. ವಾಹನದಲ್ಲಿ ಸಿಲುಕಿ ಗಾಯಗೊಂಡಿದ್ದ ನಾಲ್ವರನ್ನು ರಕ್ಷಿಸಿ ಚಿಕಿತ್ಸೆಗಾಗಿ ಸಿವಿಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಇವರಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!