ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರು ಅರಮನೆ ಮೈದಾನದ ಭೂ ವಿವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ಹಿನ್ನಡೆ ಆಗಿದೆ. ಅರಮನೆ ಮೈದಾನದ 15 ಎಕರೆಗೂ ಹೆಚ್ಚು ಭೂಮಿಗೆ ಮೂರು ಸಾವಿರ ಕೋಟಿಯ ವರ್ಗಾವಣೆ ಮಾಡಬಹುದಾದ ಅಭಿವೃದ್ಧಿ ಹಕ್ಕು ಅಂದರೆ ಟಿಡಿಆರ್ ನೀಡಲು ರಾಜಮನೆತನಕ್ಕೆ ಸುಪ್ರೀಂಕೋರ್ಟ್ ಆದೇಶಿಸಿದೆ.
ನ್ಯಾ ಅರವಿಂದ್ ಕುಮಾರ್ ನೇತೃತ್ವದ ದ್ವಿ ಸದಸ್ಯ ಪೀಠದಿಂದ ಕೂಡಲೇ ರಾಜಮನೆತನಕ್ಕೆ ಟಿಡಿಆರ್ ನೀಡುವಂತೆ ಸರ್ಕಾರಕ್ಕೆ ಆದೇಶ ಹೊರಡಿಸಲಾಗಿದೆ.
ಈ ಟಿಡಿಆರ್ಗಳನ್ನು ರಾಜಮನೆತನಕ್ಕೆ ನೀಡಬಾರದು ಎಂದು ರಾಜ್ಯ ಸರ್ಕಾರವು ಮಧ್ಯಂತರ ಅರ್ಜಿಯಲ್ಲಿ ಮನವಿ ಮಾಡಿತ್ತು. ಇದೀಗ ಅಂತಿಮವಾಗಿ ರಾಜಮನೆತನಕ್ಕೆ ಟಿಡಿಆರ್ ನೀಡುವಂತೆ ಸುಪ್ರೀಂಕೋರ್ಟ್ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ.